Tuesday, June 30, 2026
spot_imgspot_img
spot_imgspot_img

ಪತ್ನಿ, ಮಗನಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

- Advertisement -
- Advertisement -
driving

ದಾವಣಗೆರೆ: ಬೆಂಗಳೂರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತ ದಾವಣಗೆರೆಯಲ್ಲಿ ಸಂಭವಿಸಿದೆ. ವ್ಯಕ್ತಿಯೊಬ್ಬರು ಪತ್ನಿ ಹಾಗೂ ಮಗನಿಗೆ ವಿಷವುಣಿಸಿ, ತಾನೂ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಭರತ್ ಕಾಲೊನಿಯಲ್ಲಿ ಸಂಭವಿಸಿದೆ. ಮೃತರು ಲಾರಿ ಚಾಲಕ ಕೃಷ್ಣನಾಯ್ಕ (35) ಪತ್ನಿ ಸುಮಾ (30) ಹಾಗೂ ಧ್ರುವ (6)ಎನ್ನಲಾಗಿದೆ.

ಸುಮಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆರ್‌ಎಂಸಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

- Advertisement -

Related news

error: Content is protected !!