- Advertisement -
- Advertisement -



ದೇವರ ನಾಡು ಕೇರಳದಲ್ಲಿ ತಾಯಿ ಮಕ್ಕಳನ್ನು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ. ಗೂಡ್ಸ್ ಆಟೋದಲ್ಲಿ ಪತ್ನಿ ಹಾಗೂ ಮಕ್ಕಳನ್ನ ತುಂಬಿಸಿ ಪತಿರಾಯ ಬೆಂಕಿ ಹಚ್ಚಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೇರಳದ ಮಲಪ್ಪುರಂನಲ್ಲಿ ಈ ಘಟನೆ ನಡೆದಿದೆ.
ಆಟೋದಲ್ಲಿ ಪತ್ನಿ ಹಾಗೂ ಮಗುವನ್ನು ಕೂರಿಸಿಕೊಂಡಿರುವ ವ್ಯಕ್ತಿ ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಆತನಿಗೂ ಸುಟ್ಟ ಗಾಯಗಳಾಗಿದ್ದು, ಇದರ ಬೆನ್ನಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮುಹಮ್ಮದ್ ತನ್ನ ಪತ್ನಿ ಜಾಸ್ಮಿನ್ ಹಾಗೂ ಇಬ್ಬರು ಮಕ್ಕಳನ್ನ ಗೂಡ್ಸ್ ಆಟೋದಲ್ಲಿ ಹತ್ತಿಸಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದು, ಇದರ ಬೆನ್ನಲ್ಲೇ ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಓರ್ವ ಬಾಲಕಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.

- Advertisement -








