Monday, April 29, 2024
spot_imgspot_img
spot_imgspot_img

ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ; ವಿಚಾರಣೆಗೆ ಹಾಜರಾಗಲು ಐಶ್ವರ್ಯಾ ರೈಗೆ ನೋಟೀಸ್..!

- Advertisement -G L Acharya panikkar
- Advertisement -
vtv vitla
vtv vitla

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸಂಕಷ್ಟ ಎದುರಾಗಿದೆ. ಪನಾಮಾ ಪೇಪರ್ಸ್​ ಲೀಕ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಮನ್ಸ್​ (ED Summons) ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಿದೆ.

2016ರಿಂದಲೂ ಪನಾಮಾ ಪೇಪರ್ಸ್​ ಲೀಕ್​ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್​ ನೀಡಿರುವುದು ಅಚ್ಚರಿ ಮೂಡಿಸಿದೆ.

vtv vitla

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಡಿ.20ರಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್​ ನೀಡಲಾಗಿದೆ. ಮುಂಬೈನಲ್ಲಿರುವ ಅವರ ‘ಪ್ರತೀಕ್ಷಾ’ ನಿವಾಸಕ್ಕೆ ಸಮನ್ಸ್​ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎಂದು ವರದಿ ಆಗಿದೆ.

ಮೂಲಗಳ ಪ್ರಕಾರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್​ ಅವರಿಗೆ ಸೂಚಿಸಲಾಗಿದೆ. ಆದರೆ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಎರಡು ಬಾರಿ ಅವರು ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು.

- Advertisement -

Related news

error: Content is protected !!