Thursday, April 25, 2024
spot_imgspot_img
spot_imgspot_img

ಪರಸ್ಪರ ತಬ್ಬಿಕೊಂಡ ಸ್ಥಿತಿಯಲ್ಲಿ ತಾಯಿ-ಮಗುವಿನ ಮೃತದೇಹ ಪತ್ತೆ

- Advertisement -G L Acharya panikkar
- Advertisement -
driving

ತಿರುವನಂತಪುರ: ಕೇರಳದಲ್ಲಿ ಭಾರಿಮಳೆ ಸುರಿಯುತ್ತಿದ್ದು, 21ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ. ಕೋಟಯಂನ ಕೂಟ್ಟಿಕ್ಕಲ್ ಎಂಬಲ್ಲಿ ಎರಡು ಕಡೆ ಭೂಕುಸಿತ ಪ್ರದೇಶಗಳಿಂದ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ 12 ಮಂದಿಯ ಮೃತದೇಹವನ್ನು ಅವಶೇಷಗಳಡಿಯಿಂದ ಹೊರ ತೆಗೆಯಲಾಗಿದೆ.

ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳ ಭೂಕುಸಿತ ಪ್ರದೇಶಗಳಲ್ಲಿ ರಕ್ಷಣೆ ಮತ್ತು ತೆರವು ಕಾರ್ಯಾಚರಣೆ ವೇಳೆ ತಾಯಿ ಮತ್ತು ಮಗುವಿನ ಮೃತದೇಹ ಪರಸ್ಪರ ತಬ್ಬಿಕೊಂಡಿರುವ ಸ್ಥಿತಿಯಲ್ಲೇ ಪತ್ತೆಯಾಗಿದೆ. ಮತ್ತೊಂದು ಕಂದಮ್ಮ ತೊಟ್ಟಿಲಿನಲ್ಲಿ ನಿದ್ರಿಸುತ್ತಿರುವಾಗಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇದು ನೋಡುವವರ ಮನಸ್ಸನ್ನೇ ಒಮ್ಮೆ ತಲ್ಲಣಗೊಳಿಸುವಂತಿತ್ತು.

ಕೋಟಯಂ ಮತ್ತು ಪತ್ತನಂತಿಟ್ಟ ಜಿಲ್ಲೆಯಲ್ಲಿ ಪ್ರವಾಹ ಇಳಿಕೆಯಾಗಿದ್ದರೂ ಅನೇಕ ಪ್ರದೇಶಗಳು ಜಲಾವೃತವಾಗಿಯೇ ಇವೆ. ಆ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ.

- Advertisement -

Related news

error: Content is protected !!