Sunday, April 28, 2024
spot_imgspot_img
spot_imgspot_img

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ವಿ.ಹಿಂ.ಪ ಮುಖಂಡನ ಶವಪತ್ತೆ; ಆತ್ಮಹತ್ಯೆಯೋ, ಅಪಘಾತವೋ…?

- Advertisement -G L Acharya panikkar
- Advertisement -

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ‌ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್ ಸುವರ್ಣ ಸ್ಥಾನದಮನೆ ಮೃತಪಟ್ಟ ಯುವಕ.

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆ ಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ‌ ಮೃತದೇಹ ಪತ್ತೆಯಾಗಿದೆ.

ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ. ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತ ವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.

- Advertisement -

Related news

error: Content is protected !!