Wednesday, May 1, 2024
spot_imgspot_img
spot_imgspot_img

ಪಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿ ವಿಸ್ತರಣೆ

- Advertisement -G L Acharya panikkar
- Advertisement -

ಪಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಅವಧಿ ಮುಗಿಯುವ ಎರಡು ದಿನಗಳ ಮುಂಚೆಯೇ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಹೊರಡಿಸಿದೆ. ಅದೇನೆಂದರೆ ಪಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡವ ಗಡುವನ್ನು ವಿಸ್ತರಿಸಿದೆ. ಆ ಮೂಲಕ ಪಾನ್ ಹಾಗೂ ಆಧಾರ್ ಕಾರ್ಡ್​ ಲಿಂಕ್ ಮಾಡುವ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಪಾನ್ ಮತ್ತು ಆಧಾರ್ ಲಿಂಕ್ ಮಾಡುವ ಗಡುವು ಹತ್ತಿರ ಬಂದಿತ್ತು, ಈ ಹಿಂದೆ ಮಾರ್ಚ್​ 31 ಕೊನೆಯ ದಿನಾಂಕವೆಂದು ಹೇಳಲಾಗಿತ್ತು. ಆದರೆ ಇದೀಗ ಜೂನ್ 30ರವರೆಗೂ ಗಡುವು ವಿಸ್ತರಿಸಲಾಗಿದೆ.

ಆಧಾರ್, ಪಾನ್ ಕಾರ್ಡ್ ಲಿಂಕ್ ಮಾಡಿಸಲು ಸೈಬರ್​ ಸೆಂಟರ್​ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಫೈನ್ ಕಟ್ಟುವ ಭೀತಿಯಲ್ಲಿ ಕ್ಯೂನಲ್ಲಿ ನಿಂತು ಲಿಂಕ್​​ ಮಾಡಿಸುತ್ತಿದ್ದಾರೆ ಪಾನ್ ಕಾರ್ಡನ್ನು ಆಧಾರ್‌ಗೆ ಲಿಂಕ್ ಮಾಡಲಾಗಿದೆಯೇ ಎಂದು ಪರಿಶೀಲಿಸಲು ಇಲಾಖೆಯು ತೆರಿಗೆದಾರರಿಗೆ ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್‌ಗಳನ್ನು ನೀಡಿದೆ.

ಲಿಂಕ್ ಸ್ಟೇಟಸ್‌ ಪರಿಶೀಲಿಸುವುದು ಹೇಗೆ?

  • ಆಧಾಯ ತೆರಿಗೆ ಇಲಾಖೆ ಇ-ಪೋರ್ಟಲ್‌ಗೆ ಭೇಟಿ ನೀಡಿ https://www.incometax.gov.in/iec/foportal/
  • ಎಡ ಭಾಗದಲ್ಲಿ ಕಾಣುವ Quick Linksನಲ್ಲಿ Link Aadhaar Status ಮೇಲೆ ಕ್ಲಿಕ್ ಮಾಡಿ.
  • ನಿಮ್ಮ 10 ಡಿಜಿಟ್‌ನ ಪ್ಯಾನ್ ಸಂಖ್ಯೆ ಹಾಗೂ 12 ಡಿಜಿಟ್‌ನ ಆಧಾರ್ ಸಂಖ್ಯೆಯನ್ನು ನಮೂದಿಸಿ
  • View Link Aadhaar Status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಾನ್, ಆಧಾರ್ ಲಿಂಕ್ ಆಗಿದೆಯೇ ಎಂದು ತಿಳಿಯಲಿದೆ.
  • ನಿಮ್ಮ ಆಧಾರ್ ಮತ್ತು ಪಾನ್ ಜೋಡಣೆ ಆಗಿದ್ದರೆ, “Your PAN is already linked to given Aadhaar” (ನಿಮ್ಮ ಪಾನ್ ಈಗಾಗಲೇ ಈ ಆಧಾರ್ ಜೊತೆ ಲಿಂಕ್ ಆಗಿದೆ) ಎಂಬಂತಹ ಸಂದೇಶ ಬರುತ್ತದೆ.
- Advertisement -

Related news

error: Content is protected !!