Saturday, April 20, 2024
spot_imgspot_img
spot_imgspot_img

ಪಿಎಫ್‌ಐ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾ; ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

- Advertisement -G L Acharya panikkar
- Advertisement -

ಬೆಂಗಳೂರು: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ಆದೇಶವನ್ನು ಎತ್ತಿಹಿಡಿದಿದೆ.

ಬೆಂಗಳೂರಿನ ನಿವಾಸಿ ಕರ್ನಾಟಕದ ಪಿಎಫ್‌ಐ ಅಧ್ಯಕ್ಷ ನಾಸೀರ್‌ ಅಲಿ ಸಲ್ಲಿಸಿದ ರಿಟ್ ಅರ್ಜಿಯನ್ನು ಕುರಿತಂತೆ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠನ ಬುಧವಾರ ಆದೇಶ ಹೊರಡಿಸಿದೆ.

ಪಿಎಫ್‌ಐ ಸಂಘಟನೆಯು ದೇಶ ವಿರೋಧಿ ಕೃತ್ಯಗಳನ್ನು ನಡೆಸುತ್ತಿದೆ. ಅದು ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿ ದೇಶದಲ್ಲಿ ಹಿಂಸಾತ್ಮಕ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಮತ್ತು ಅಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದೆ. ಜೊತೆಗೆ ಸಂಘಟನೆಯ ಸದಸ್ಯರು ರಾಷ್ಟ್ರದಲ್ಲಿ ಭೀತಿಯ ವಾತಾವಾರಣ ಸೃಷ್ಟಿ ಮಾಡುತ್ತಿದ್ದರೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.

- Advertisement -

Related news

error: Content is protected !!