Wednesday, April 17, 2024
spot_imgspot_img
spot_imgspot_img

ಪಿಎಸ್‌ಐ ಅಕ್ರಮ ಪರೀಕ್ಷಾ ಹಗರಣ; ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದು “ಉಗ್ರ” ಸಂದೇಶ

- Advertisement -G L Acharya panikkar
- Advertisement -

ಬೆಂಗಳೂರು: ಪಿಎಸ್‌ಐ ಅಕ್ರಮ ಪರೀಕ್ಷಾ ಹಗರಣದಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ತಮ್ಮ ರಕ್ತದಲ್ಲಿ ಸುಮಾರು 2 ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು, ತಮಗೆ ನ್ಯಾಯ ಒದಗಿಸಿಕೊಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಿಎಸ್‌ಐ ಪರೀಕ್ಷೆಯ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು, ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು. ಆದರೆ ನಿಯತ್ತಿನಿಂದ, ಪ್ರಾಮಾಣಿಕವಾಗಿ ಬರೆದು ಪಾಸಾದವರಿಗೆ ಮೋಸವಾಗಬಾರದು. 2021ರಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯಲ್ಲಿ ಕೂಡ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ, ಅವರು ಸೂಕ್ತ ತನಿಖೆಗೆ ಆದೇಶ ಮಾಡಿ, ನಮಗೆ ನ್ಯಾಯ ಕೊಡಿಸುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಪತ್ರದಲ್ಲಿ ಬರೆಯಲಾಗಿದೆ.

ಇನ್ನು 2 ಪುಟಗಳ ರಕ್ತ ಪತ್ರದಲ್ಲಿ ಎಚ್ಚರಿಕೆಯೊಂದನ್ನು ನೀಡಲಾಗಿದೆ. “ಒಂದು ವೇಳೆ ನ್ಯಾಯ ಕೊಡಿಸದೇ ಹೋದ್ರೆ ನಾವು ಮುಂದೆ ಟೆರರಿಸ್ಟ್ ಗಳ ಕೈಜೋಡಿಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತ ವ್ಯವಸ್ಯೆ ಬಂದು ಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನ ಬರೆಯುವುದಿಲ್ಲ. ಬದಲಾಗಿ ಟೆರೆರಿಸ್ಟ್ ಗಳ ಜೊತೆ ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದ ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ” ಅಂತ ಎಚ್ಚರಿಸಿದ್ದಾರೆ.

ಸುಮಾರು 2 ಪುಟಗಳ ಪತ್ರವನ್ನು ರಕ್ತದಲ್ಲಿ ಬರೆಯಲಾಗಿದೆ. ಆದರೆ ಪತ್ರದಲ್ಲಿ ತಮ್ಮ ಹೆಸರನ್ನು ಅಭ್ಯರ್ಥಿಗಳು ನಮೂದಿಸಿಲ್ಲ. ನಾವು ಎಂಟು ಮಂದಿ ಇದ್ದೇವೆ, ನಾವೆಲ್ಲರು ಈ ನಿರ್ಧಾರ ಮಾಡಿದ್ದಾಗಿ ಪ್ರಧಾನಿಗೆ ಪತ್ರ ಬರೆದಿರೋ ನೋಂದ ಪಿಎಸ್‌ಐ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.

- Advertisement -

Related news

error: Content is protected !!