Saturday, May 18, 2024
spot_imgspot_img
spot_imgspot_img

ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ವಿಚಾರ; ಮಾಜಿ ಎಡಿಜಿಪಿ ಅಮೃತ್ ಪೌಲ್ ಸಿಐಡಿ ವಶಕ್ಕೆ

- Advertisement -G L Acharya panikkar
- Advertisement -

ಬೆಂಗಳೂರು: ಬಂಧಿತರಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ರನ್ನು ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧಿಸಿ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.

ಪೊಲೀಸ್ ನೇಮಕಾತಿ ವಿಭಾದ ಎಜಿಡಿಪಿಯಾಗಿದ್ದ ಅಮೃತ್ ಪೌಲ್ ರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪೌಲ್ ರನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಎಡಿಜಿಪಿ ಅಮೃತ್ ಪೌಲ್ ಹಾಗೂ ಆರೋಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿದೆ. ಇನ್ನು ಮೊಬೈಲ್ ದತ್ತಾಂಶವನ್ನು ಅಳಿಸಿ ಹಾಕಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇನ್ನು ಐದು ದಿನಗಳ ಕಾಲ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಕೋರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಇಂದು ಕಾರ್ಲ್‌ಟನ್ ಹೌಸ್‌ನಲ್ಲಿರುವ ಸಿಐಡಿ ಕಚೇರಿಗೆ 1995 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪೌಲ್ ಅವರನ್ನು ಮೂರನೇ ಬಾರಿ ವಿಚಾರಣೆಗೆ ಕರೆಯಲಾಗಿತ್ತು. ಹಗರಣದಲ್ಲಿ ಪೌಲ್ ಸೇರಿದಂತೆ 79 ಜನರನ್ನು ಬಂಧಿಸಿರುವ ಸಿಐಡಿ ಇದುವರೆಗೆ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಿದೆ.

- Advertisement -

Related news

error: Content is protected !!