Monday, October 5, 2026
spot_imgspot_img
spot_imgspot_img

ಪುಂಜಾಲಕಟ್ಟೆ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಖಾಕಿ ವಶಕ್ಕೆ!

- Advertisement -
- Advertisement -

ಬೆಳ್ತಂಗಡಿ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಸೋಣಂದೂರು ಶಾಲೆ ಬಳಿ ನಡೆದಿದೆ. ಬಂಧಿತ ಆರೋಪಿಗಳು ಗಣೇಶ್(32) ಹಾಗೂ ನವಾಜ್ (26) ಎನ್ನಲಾಗಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಕುಟ್ಟಿ ಎಂ.ಕೆ ರವರು ಸಿಬ್ಬಂದಿಗಳೊಂದಿಗೆ ಸೋಣಂದೂರು ಶಾಲೆಯ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಬಂದ ಮಿನಿ ಟೆಂಪೋ ವಾಹನವನ್ನು ಪರಿಶೀಲಿಸಿದಾಗ ಆರೋಪಿಗಳು ಎರಡು ಹೋರಿ ಕರುಗಳನ್ನು ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೇ ತುಂಬಿಸಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!