Friday, March 29, 2024
spot_imgspot_img
spot_imgspot_img

ಪುಂಜಾಲಕಟ್ಟೆ: ಅಪ್ರಾಪ್ತನಿಗೆ ಮದುವೆ ಮಾಡಲು ಸಕಲ ಸಿದ್ಧತೆ..! ಅಧಿಕಾರಿಗಳಿಂದ ದಾಳಿ – ಎರಡನೇ ಬಾರಿ ತಪ್ಪಿದ ಮದುವೆ

- Advertisement -G L Acharya panikkar
- Advertisement -

ಪುಂಜಾಲಕಟ್ಟೆ: ಅಪ್ರಾಪ್ತನಿಗೆ ಎರಡನೇ ಬಾರಿ ಮದುವೆ ಮಾಡಲು ಸಿದ್ಧತೆಯಲ್ಲಿದ್ದ ವೇಳೆ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ನಡೆದಿದೆ. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಇದೇ ಅಪ್ರಾಪ್ತನಿಗೆ ಕಳೆದ ವರ್ಷ ಈತನಿಗೆ ಇದೇ ರೀತಿ ಮದುವೆಗಾಗಿ ಸಕಲ ಸಿದ್ದತೆಗಳು ನಡೆದಿದ್ದು, ಆಗಲೂ ಸಹ ದಾಳಿ ನಡೆಸಲಾಗಿತ್ತು. ಅಪ್ರಾಪ್ತ ಬಾಲಕನೋರ್ವನಿಗೆ ಇಂದು ಮದುವೆ ಮಾಡಿಸಲು ಸಕಲಸಿದ್ಧತೆಗಳನ್ನು ನಡೆದಿದ್ದು, ಅಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಮನೆಗೆ ಧಾವಿಸಿ, ಮದುವೆ ನಡೆಸದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಈ ಅಪ್ರಾಪ್ತ ಬಾಲಕನಿಗೆ ತಪ್ಪಿದ ಎರಡನೇಯ ಮದುವೆ.
ಕಳೆದ ವರ್ಷ ಈತನಿಗೆ ಇದೇ ರೀತಿ ಮದುವೆಗಾಗಿ ಸಕಲ ಸಿದ್ದತೆಗಳು ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಮನೆಗೆ ಹೋಗಿ ವಿಚಾರ ತಿಳಿಸಿ ಮದುವೆಯನ್ನು ನಿಲ್ಲಿಸಿದ್ದರು. ಇದೀಗ ಎರಡನೇ ಬಾರಿ ಅದೇ ರೀತಿ ಅಪ್ರಾಪ್ತ ಬಾಲಕನಿಗೆ ಮತ್ತೆ ಮದುವೆಗಾಗಿ ತಯಾರಿಯಲ್ಲಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಬಂಟ್ವಾಳ ಸಿ.ಡಿ.ಪಿ.ಒ‌‌.ಗಾಯತ್ರಿ ಕಂಬಳಿ ಅವರು ಪುಂಜಾಲಕಟ್ಟೆ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿ.ಡಿ.ಪಿ.ಒ. ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಮನೆಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ.

ಸುಳ್ಳು ಸರ್ಟಿಫಿಕೇಟ್
ಕಳೆದ ಬಾರಿ ಅಪ್ರಾಪ್ತ ಬಾಲಕನಿಗೆ ಮದುವೆ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂಬ ಕಾರಣಕ್ಕಾಗಿ ಪೋರ್ಜರಿ ಬರ್ತ್ ಸರ್ಟೀಪಿಕೇಟ್ ಸೃಷ್ಟಿಸಿ ಸ್ಥಳಕ್ಕೆ ಬಂದ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಲು ನೋಡಿದ್ದಾರೆ. ಆದರೆ ಅಧಿಕಾರಿಗಳು ಇವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಸುಳ್ಳು ದಾಖಲೆ ಪತ್ರಗಳು ಎಂಬುದು ಸಾಬೀತಾಗಿದೆ.

ಅ ಬಳಿಕ ಪೋಷಕರಿಗೆ ಕಾನೂನಿನ ಅಡಿಯಲ್ಲಿ ಬರುವ ವಿಚಾರಗಳನ್ನು ಮನವರಿಕೆ ಮಾಡಿದ ಅಧಿಕಾರಿಗಳು ಮದುವೆ ನಿಲ್ಲಿಸುವಂತೆ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಲು ಸೂಚನೆ ನೀಡಿದ್ದಾರೆ.

- Advertisement -

Related news

error: Content is protected !!