Saturday, June 28, 2025
spot_imgspot_img
spot_imgspot_img

ಪುತ್ತೂರು:(ಎ.5) ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವದ ನೇಮೋತ್ಸವ

- Advertisement -
- Advertisement -

ಪುತ್ತೂರು: ಕೆಯ್ಯೂರು ಗ್ರಾಮದ ಮಾಡಾವು ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವವು ಎ. 5ರಂದು ನಡೆಯಲಿದೆ.

ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ನಾಗದೇವರಿಗೆ ತಂಬಿಲ ಸೇವೆ, ಪರಿವಾರ ದೈವಗಳ ತಂಬಿಲ, ಶ್ರೀ ವೆಂಕಟರಮಣ ದೇವರ ಸೇವೆ, ಮಧ್ಯಾಹ್ನ ಶ್ರೀ ದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ದುರ್ಗಾ ಭಜನಾ ಮಂಡಳಿ ಕೆಯ್ಯೂರು ಇವರಿಂದ ಭಜನಾ ಕಾರ್ಯಕ್ರಮ, ಭಂಡಾರ ತೆಗೆದು, ಅನ್ನಸಂತರ್ಪಣೆ ಬಳಿಕ ಶ್ರೀ ಹೊಸಮ್ಮ ದೈವದ ನೇಮೋತ್ಸವ, ಪ್ರಸಾದ ‘ವಿತರಣೆ ನಡೆಯಲಿದೆ.

ಎ.6 ರಂದು ಬೆಳಿಗೆ ಶ್ರೀ ದೈವದ ಗಣಗಳಿಗೆ ಬಲಿ ಸೇವೆ. ಎ.7 ರಂದು ಬೆಳಿಗ್ಗೆ, ಪರಿವಾರ ದೈವಗಳಾದ ಪಂಜುರ್ಲಿ,ಕಲ್ಲುರ್ಟಿ, ಕಲ್ಲಾಲ್ತ, ಗುಳಿಗ ಮತ್ತು ಓರಿಮಾಣಿ ಗುಳಿಗ ದೈವಗಳ ನೇಮ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದರೆ.

- Advertisement -

Related news

error: Content is protected !!