Friday, April 19, 2024
spot_imgspot_img
spot_imgspot_img

ಪುತ್ತೂರು:ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಡಾ. ಪಿ.ಬಿ.ರೈ ಪ್ರತಿಷ್ಠಾನ, ನೂಜಿ ತರವಾಡು, ಕೆಯ್ಯೂರು, ಪುತ್ತೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಡಾ. ಪಿ. ಬಿ. ರೈ ಪ್ರತಿಷ್ಠಾನ, ನೂಜಿ ತರವಾಡು, ಕೆಯ್ಯೂರು, ಪುತ್ತೂರು ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ದಂಬೆಕ್ಕಾನ ಸದಾಶಿವ ರೈ ಇವರಿಂದ ರಚಿತ “ಬಂಟ ಮದುವೆ” (ಬಂಟ ಗುರಿಕ್ಕಾರನ ಕೈಪಿಡಿ) ಬಿಡುಗಡೆ, ದಂಬೆಕ್ಕಾನ ಸದಾಶಿವ ರೈ ಕೊಡುಗೆಯಾಗಿ ನೀಡಿದ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆ ಹಾಗೂ ಡಾ. ಪಿ.ಬಿ ರೈ ಪ್ರತಿಷ್ಠಾನ ವತಿಯಿಂದ ನೀಡಲ್ಪಡುವ “ಅಣಿಲೆ ವೆಂಕಪ್ಪ ರೈ ಪ್ರಶಸ್ತಿ ಪ್ರದಾನ” ಸಮಾರಂಭವು ದಿನಾಂಕ 27-08-2022ನೇ ಶನಿವಾರ 10-30ಕ್ಕೆ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ, ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೇರವೇರಿಸಲಿದ್ದಾರೆ. ಪ್ರಶಸ್ತಿ ಪ್ರದಾನವನ್ನು ಡಾ. ಬಿ.ಆರ್‌ ಶೆಟ್ಟಿ ಹಾಗೂ ಕೈಪಿಡಿ ಲೋಕಾರ್ಪಣೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಮಾಡಲಿದ್ದಾರೆ.

ಕಾರ್ಯಕ್ರಮದ ಅತಿಥಿಗಳಾಗಿ ಜಾಗತಿಕ ಬಂಟ ಪ್ರತಿಷ್ಠಾನ (ರಿ) ಮಂಗಳೂರು ಅಧ್ಯಕ್ಷರಾದ ಸಿ. ಎ. ಸುಧೀರ್ ಕುಮಾರ್ ಶೆಟ್ಟಿ ಯಣ್ಮಕಜೆ, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರ ಶಾಸಕರಾದ ವೈ. ಭರತ್ ಶೆಟ್ಟಿ, ಕರ್ನಾಟಕ ವಿಧಾನ ಪರಿಷತ್‌ ಶಾಸಕರಾದ ಮಂಜುನಾಥ ಭಂಡಾರಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಪುತ್ತೂರು ತಾಲೂಕು ಸಂಚಾಲಕರದ ದಯಾನಂದ ರೈ ಮನವಳಿಕೆಗುತ್ತು, ಬಂಟರ ಸಂಘ ಮತ್ತೂರು ತಾಲೂಕು ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಸಂಘ ಸುರತ್ಕಲ್ ಅಧ್ಯಕ್ಷರಾದ ಸುಧಾಕರ ಪೂಂಜ, ಮುಂಬಯಿ ಉದ್ಯಮಿ ವಿವೇಕ್‌ ಶೆಟ್ಟಿ ನಗ್ರಿಗುತ್ತು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದ ಪ್ರಸ್ತಾವನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಮತ್ತು ಗೌರವಾಧ್ಯಕ್ಷರು, ಡಾ| ಪಿ.ಬಿ.ರೈ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಮಾಡಲಿದ್ದಾರೆ.

- Advertisement -

Related news

error: Content is protected !!