Tuesday, May 21, 2024
spot_imgspot_img
spot_imgspot_img

ಪುತ್ತೂರು: ಅಂತರ್‌ರಾಜ್ಯ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು; ವಿಟ್ಲದ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಕೈವಾಡ

- Advertisement -G L Acharya panikkar
- Advertisement -

ಪುತ್ತೂರು: ಅಂತರ್‌ರಾಜ್ಯ ಸರ ಕಳ್ಳತನದ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಕಾಸರಗೋಡು ಬಂಬ್ರಾಣ ಕುಂಬ್ಳೆ ನಿವಾಸಿ, ಫಝಲ್‌.ಎ(37) ಮತ್ತು ಕಾಸರಗೋಡು ಸೀತಾಂಗೋಳಿ ಅಬ್ದುಲ್‌ ನಿಯಾಝ್(19) ಎಂದು ಗುರುತಿಸಲಾಗಿದೆ.

ಮಹಿಳೆಯೊಬ್ಬರು ತನ್ನ ಮನೆ ಕಡೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದು ಬೈಕ್‌ನಲ್ಲಿ ಪರಾರಿಯಾದ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಕೋನಡ್ಕ ಎಂಬಲ್ಲಿ ಜೂನ್ 7 ರಂದು ನಡೆದಿತ್ತು.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಪುತ್ತೂರು ಗ್ರಾಮಾಂತರ ಪೊಲೀಸರ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಫಝಲ್ ಎ ಹಾಗೂ ಅಬ್ಧುಲ್ ನಿಯಾಝ್ ಎಂಬವರನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿ ಆರೋಪಿಗಳಿಂದ ಸುಲಿಗೆ ಮಾಡಿದ 50,000 ರೂ. ನಗದು ಮತ್ತು ತುಂಡಾದ ಕರಿಮಣಿ ಸರ, ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಎಫ್ ಝಡ್ ಬೈಕ್ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಕೆಂಪು ಬಣ್ಣದ ರಾಯಲ್ ಎನ್ ಫೀಲ್ಡ್ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಈ ಹಿಂದೆ 2019ರಲ್ಲಿ ವಿಟ್ಲ ಠಾಣಾ ವ್ಯಾಪ್ತಿಯ ಕುದ್ದುಪದವು ಜಗನ್ನಾಥ ಶೆಟ್ಟಿಯವರ ಮಾಲಕತ್ವದ ಪೆಟ್ರೋಲ್ ಪಂಪ್ ಕಳ್ಳತನ ಪ್ರಕರಣ ಹಾಗೂ ವಿಟ್ಲ ಕಾಶಿಮಠ ಎಂಬಲ್ಲಿ ಗೂಡ್ಸ್ ಟೆಂಪೋ ಕಳ್ಳತನ ಪ್ರಕರಣ ಮತ್ತು ಪುತ್ತೂರು ಠಾಣಾ ವ್ಯಾಪ್ತಿಯ ಬೈಪಾಸ್ ರಸ್ತೆಯಲ್ಲಿ ಮಹಿಳೆಯ ಸರ ಕಳ್ಳತನದ ಆರೋಪಿಗಳೆಂದು ತಿಳಿದುಬಂದಿದೆ.

ಈ ಆರೋಪಿತರ ಪೈಕಿ ಪಝಲ್ ಎ ಎಂಬಾತನ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಮಂಜೇಶ್ವರ, ಕುಂಬ್ಳೆ, ಬದಿಯಡ್ಕ, ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ.

- Advertisement -

Related news

error: Content is protected !!