Tuesday, June 23, 2026
spot_imgspot_img
spot_imgspot_img

ಪುತ್ತೂರು: ಅನ್ಯಕೋಮಿನ ತಂಡದಿಂದ ಕಾಲೇಜು ವಿದ್ಯಾರ್ಥಿಗಳ ಮೇಲೆ ಹಲ್ಲೆ; ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

- Advertisement -
- Advertisement -

ಪುತ್ತೂರು: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ಷುಲ್ಲಕ ಕಾರಣಕ್ಕೆ ಅನ್ಯ ಕೋಮಿಗೆ ಸೇರಿದ ತಂಡ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಕಾಲೇಜು ಬಿಟ್ಟು ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದ ವೇಳೆ ಅನ್ಯಕೋಮಿನ ಯುವಕರ ಗುಂಪೊಂದು ಏಕಾಏಕಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಸಾಲ್ಮರ ನಿವಾಸಿಗಳಾದ ಇಜಾಝ್ ಮತ್ತು ಝಿಯಾದ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!