Tuesday, May 21, 2024
spot_imgspot_img
spot_imgspot_img

ಪುತ್ತೂರು: ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ – ವಿಶೇಷ ಉಪನ್ಯಾಸ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು: ದಿನಾಂಕ 08/06/22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಹಯೋಗದೊಂದಿಗೆ “ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ” ಎಂಬ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸಂತ ಫಿಲೋಮಿನಾ ಕಾಲೇಜ್‘ನ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ ವಾಸುದೇವ ಏನ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ದೈನಂದಿನ ಜೀವನದಲ್ಲಿ ಸರಿಯಾದ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಅರ್ಥಶಾಸ್ತ್ರದ ಪ್ರಾಮುಖ್ಯತೆ, ಭಾರತದ ಆರ್ಥಿಕತೆಯಲ್ಲಿ ಹಣದುಬ್ಬರ, ಜನಸಂಖ್ಯೆ, ಆರ್ಥಿಕ ಚಟುವಟಿಕೆಗಳಲ್ಲಿ ವಿವಿಧ ವಲಯಗಳ ಪಾತ್ರ, ಆರ್ಥಿಕ ಬೆಳವಣಿಗೆಯಲ್ಲಿ ಜಿಡಿಪಿಯ ಪಾತ್ರ ಎಂಬೀ ವಿಷಯಗಳನ್ನು ವಿವರಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ ಇವರು ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡುತ್ತಾ ವ್ಯವಸ್ಥಿತವಾಗಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಿದೆ. ವಿದ್ಯಾರ್ಥಿಗಳು ಪತ್ರಿಕೆಯಲ್ಲಿ ಬರುವಂತಹ ಹಣದುಬ್ಬರ, ಜಿಡಿಪಿ, ಜಿಎಸ್ ಟಿ ಇತ್ಯಾದಿಗಳನ್ನು ಗ್ರಹಿಸಿಕೊಂಡು ಅವುಗಳಿಗೆ ಸ್ಪಂದಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ಹರಿಪ್ರಸಾದ್ ಅವರು ಅರ್ಥಶಾಸ್ತ್ರವು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸುತ್ತದೆ. ವಿದ್ಯಾರ್ಥಿಗಳು ಅರ್ಥಶಾಸ್ತ್ರದ ಮಹತ್ವವನ್ನು ಅರಿತು ಮುನ್ನಡೆಯಬೇಕು ಎಂದು ಶುಭ ಹಾರೈಸಿದರು.


ಪ್ರಸ್ತಾವಿಕ ನುಡಿಗಳನ್ನು ಮಾತನಾಡುತ್ತಾ ಕಾರ್ಯಕ್ರಮನ್ನು ಆರಂಭಿಸಿದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ.ಶ್ರೀ ತಿಮ್ಮಯ್ಯ ಎಲ್.ಎನ್ ಅವರು ಅರ್ಥಶಾಸ್ತ್ರದ ಮಹತ್ವವನ್ನು ಸರಳವಾಗಿ ವಿವರಿಸಿ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದ ಗಣ್ಯವ್ಯಕ್ತಿಗಳನ್ನು ಸ್ವಾಗತಿಸಿದರು. ಅರ್ಥಶಾಸ್ತ್ರದ ಉಪನ್ಯಾಸಕಿ ಜ್ಯೋತಿ ರೈ ವಂದಿಸಿದರು. ಅಂತಿಮ ಪದವಿ ವಿದ್ಯಾರ್ಥಿ ರೋಹಿತ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಂದರ್ಭದಲ್ಲಿ ಉಪನ್ಯಾಸಕ ಡಾ| ಮುರಳಿ ಕೆ ವಿ, ವೆಂಕಟ ಕೃಷ್ಣ ಭಾಗವತ್, ರಜನಿ, ಗ್ರಂಥಪಾಲಕರದ ರಾಮ.ಕೆ, ದೈಹಿಕ ನಿರ್ದೇಶಕ ಡಾ| ಪೊಡಿಯ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!