Thursday, June 18, 2026
spot_imgspot_img
spot_imgspot_img

ಪುತ್ತೂರು: ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿದ ಚಾಲಕ; ಆಟೋ ಸೀಜ್‌

- Advertisement -
- Advertisement -
vtv vitla

ಪುತ್ತೂರು: ಆಟೋ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿ ಮುಖ್ಯ ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರಣಕ್ಕಾಗಿ ಸಾರ್ವಜನಿಕರು ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆಯಲ್ಲಿ ನಡೆದಿದೆ.

ಕಲ್ಲಾರೆ ಧನ್ವಂತರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಮುಖ್ಯ ರಸ್ತೆ ಬದಿಯ ಪಾರ್ಕಿಂಗ್ ನಲ್ಲಿ ಆಟೋ ಚಾಲಕನೋರ್ವ ಕಂಠಪೂರ್ತಿ ಕುಡಿದು ಆಟೋ ರಿಕ್ಷಾದಲ್ಲಿ ಮಲಗಿದ್ದು, ಸುಮಾರು ಒಂದು ಗಂಟೆಯವರೆಗೂ ವ್ಯಕ್ತಿ ಮಲಗಿಯೇ ಇದ್ದ ಹಿನ್ನೆಲೆ ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಗೆ ಏನೋ ಅಪಾಯ ಸಂಭವಿಸಿದೆ ಎಂದು ಯೋಚಿಸಿ, ಸಂಚಾರಿ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಚಾಲಕ ಕುಡಿದು ಆಟೋ ರಿಕ್ಷಾ ಚಾಲನೆ ಮಾಡಿದ ಹಿನ್ನೆಲೆ ಸಂಚಾರಿ ಠಾಣಾ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದು, ಆಟೋ ರಿಕ್ಷಾವನ್ನು ಸೀಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!