Saturday, May 18, 2024
spot_imgspot_img
spot_imgspot_img

ಪುತ್ತೂರು: ಕಬಕದಲ್ಲಿ ನಿರ್ಮಾಣವಾಗಲಿದೆ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ; ಜಾಗ ಗುರುತು

- Advertisement -G L Acharya panikkar
- Advertisement -

ಪುತ್ತೂರು: ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಸ್ಟೇಡಿಯಂ ಪುತ್ತೂರಿನ ಕಬಕದಲ್ಲಿ ನಿರ್ಮಾಣವಾಗಲಿದೆ.

ನಿರ್ಮಾಣಕ್ಕೆ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ. ಇದಲ್ಲದೆ ಸರಕಾರಿ ಜಮೀನು ಗುರುತಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ ಗೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸಮ್ಮತಿ ಸಿಕ್ಕಿದೆ.

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಬರುವ, ಕಬಕ ಗ್ರಾಮದ ಸರ್ವೇ ನಂಬರ್‌ 260/1ಪಿ1ರಲ್ಲಿ 23.25 ಎಕ್ರೆ ಸರಕಾರಿ ಜಮೀನನ್ನು ಗುರುತಿಸಲಾಗಿದೆ. ಇದು ಪೆರಿಯತ್ತೋಡಿ ಸಮೀಪದಲ್ಲಿದ್ದು ಪುತ್ತೂರು-ಮಂಗಳೂರು ಹೆದ್ದಾರಿಯಿಂದ ಸುಮಾರು ಎರಡು ಕಿ.ಮೀ. ಅಂತರದಲ್ಲಿದೆ.

ಒಳನಾಡಿನಲ್ಲಿ ವಿಶ್ವದರ್ಜೆಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸುವ ಇರಾದೆ ಹೊಂದಿದೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಶನ್‌ ಜತೆ ಸಂಯೋಜನೆ ಹೊಂದಿರುವ ಯೂನಿಯನ್‌ ಕ್ರಿಕೆಟರ್ಸ್‌ ಪುತ್ತೂರು ಎಂಬ ಸಂಸ್ಥೆಯು ಈ ವಿಚಾರದಲ್ಲಿ ಹೆಚ್ಚು ಮುತುವರ್ಜಿ ವಹಿಸಿದೆ.

2017ರ ಜುಲೈ 22ರಂದು ಅಸೋಸಿಯೇಶನ್‌ ಕಾರ್ಯದರ್ಶಿ ಆರ್‌. ಸುಧಾಕರ್‌ ರಾವ್‌ ಅವರು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಿಗೆ ಪತ್ರ ಬರೆದಿದ್ದರು. ಪುತ್ತೂರಿನಲ್ಲಿ 25 ಎಕರೆ ಸರಕಾರಿ ಜಾಗವನ್ನು ದೀರ್ಘಾವಧಿ ಗುತ್ತಿಗೆ ಆಧಾರದಲ್ಲಿ ನೀಡುವಂತೆ ಮನವಿ ಮಾಡಿದ್ದರು. ಯಾವುದೇ ಕ್ರೀಡಾ ಸಂಸ್ಥೆಗಳು ನಡೆಸುವ ಕ್ರೀಡಾ ಚಟುವಟಿಕೆಗಳಿಗೆ ಸರಕಾರ ಯಾವ ದರದಲ್ಲಿ ಜಮೀನನ್ನು ಲೀಸ್‌ಗೆ ನೀಡುತ್ತದೆಯೋ ಅಂಥದೇ ಮಾದರಿಯ ದರದಲ್ಲಿ ನೀಡುವಂತೆ ಕೋರಿದ್ದರು. ಇದರಂತೆ ಜಮೀನು ಗುರುತಿಸಲಾಗಿದ್ದು, ಪ್ರಕ್ರಿಯೆ ಮುಂದುವರಿದಿದೆ.

- Advertisement -

Related news

error: Content is protected !!