- Advertisement -
- Advertisement -
ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿ ನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಮರನಾಥ್ ಗೌಡ ಅವರ i20 ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಎರಡು ಕಾರುಗಳು ಹಾನಿಗೊಂಡಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
- Advertisement -