Saturday, May 4, 2024
spot_imgspot_img
spot_imgspot_img

ಪುತ್ತೂರು: ಕಾಲೇಜಿನ ಬಳಿ ಗಾಂಜಾ ಮಾರಾಟಕ್ಕೆ ಯತ್ನ; ಸಾವಿರಾರು ಮೌಲ್ಯದ ಗಾಂಜಾ ಸಹಿತ ಆರೋಪಿ ಪೊಲೀಸ್ ವಶಕ್ಕೆ..!

- Advertisement -G L Acharya panikkar
- Advertisement -

ಪುತ್ತೂರು: ಕಾಲೇಜಿನ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೊರ್ವನನ್ನು ಗಾಂಜಾ ಸಹಿತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಪುತ್ತೂರಿನ ಖಾಸಗಿ ಕಾಲೇಜಿನ ಬಳಿ ನಡೆದಿದೆ.

ಕೇರಳ ಮೂಲದ ಕಾಟಕ್ಕಾಡು ನಿವಾಸಿ ಮೋಬಿನ್ ಜೋರ್ಜ್(20) ಬಂಧಿತ ಆರೋಪಿ.

ಖಾಸಗಿ ಕಾಲೇಜೊಂದರ ಬಳಿಯಿರುವ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಯಾರೋ ಒಬ್ಬ ವ್ಯಕ್ತಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದಾಗಿ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೋಬಿನ್ ಜೋರ್ಜ್ ಎಂಬಾತನನ್ನು ಬಂಧಿಸಿ, ಆತನಿಂದ ಗಾಂಜಾ ಸಹಿತ 10,050 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 64/2022 ಕಲಂ: 8(ಸಿ),20 (b) (ii)B NDPS ಆಕ್ಟ್ ಅನ್ವಯ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!