Monday, June 8, 2026
spot_imgspot_img
spot_imgspot_img

ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್’ಗೆ ರಾಜೀನಾಮೆ..! ಕುಮಾರಸ್ವಾಮಿ ಸಮ್ಮುಖದಲ್ಲಿ ಇಂದು ಜೆಡಿಎಸ್ ಸೇರ್ಪಡೆ

- Advertisement -
- Advertisement -

ಜೆಡಿಎಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಕಣಕ್ಕೆ

vtv vitla

ಪುತ್ತೂರು: ಕಾಂಗ್ರೆಸ್‌ ಮುಖಂಡ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಾ ಪ್ರಭಾ ಗೌಡ ರವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಮುಖಂಡ ದಿವ್ಯಪ್ರಭಾ ಗೌಡ ಚಿಲ್ತಡ್ಕ ರವರು ಎಂಎಲ್‌ಎ ರಘು ಆಚಾರ್ ಹಾಗೂ ಇತರ ಕಾಂಗ್ರೆಸ್‌ ಮುಖಂಡರ ಜೊತೆ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಕೆಲವು ಮಾಹಿತಿ ಪ್ರಕಾರ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆಯೂ ಇದೆ ಎಂದು ಮಾತುಗಳು ಕೇಳಿಬರುತ್ತಿವೆ.

- Advertisement -

Related news

error: Content is protected !!