Monday, April 29, 2024
spot_imgspot_img
spot_imgspot_img

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಚಂದ್ರಹಾಸ ಇವರಿಗೆ ಜೀವ ಬೆದರಿಕೆ ಕರೆ; ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲು

- Advertisement -G L Acharya panikkar
- Advertisement -

ಪುತ್ತೂರು: ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಜೀವ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಶ್ವರಮಂಗಲ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾಗಿರುವ ಚಂದ್ರಹಾಸ ಎಂ.(24) ಇವರಿಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ, ತುಳು ಮತ್ತು ಕನ್ನಡದಲ್ಲಿ ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆ ಅದೇ ರೀತಿ ನಿನ್ನ ಹೆಣ ನಾಳೆ ಸಂಜೆಯೊಳಗೆ ಬೀಳುತ್ತದೆ ಎಂದು ಅವಾಚ್ಯ ಶಬ್ದಗಳಿಂದ ಬೈದಿದ್ದು, ಬಳಿಕ ತನ್ನ ಮೊಬೈಲಿಗೆ 10 ನಿಮಿಷಕೊಮ್ಮೆ ಬೇರೆ ಬೇರೆ ಅನಾಮಧೇಯ ನಂಬರಿನಿದ ಕರೆ ಮಾಡಿದ ವ್ಯಕ್ತಿಗಳು ಕೂಡಾ ಈ ವಿಚಾರವನ್ನೇ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ನ್ಯಾಯಾಲಯದ ಅನುಮತಿ ಪಡೆಯಲು ತಿಳಿಸಿದ್ದರು.

ಚಂದ್ರಹಾಸ ಎಂ.(24)

ಚಂದ್ರಹಾಸ ಅವರು ಮಾ.20ರಂದು ವಕೀಲರ ಮೂಲಕ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಕುರಿತು ಪುತ್ತೂರು ಸಂಪ್ಯ ಪೊಲೀಸ್ ಠಾಣೆಗೆ ಮಾ.23ರಂದು ಆದೇಶ ನೀಡಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತನಗೆ ಜೀವ ಬೆದರಿಕೆ ಹಾಕಿದ ಅನಾಮಧೇಯ ವ್ಯಕ್ತಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚಂದ್ರಹಾಸ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

- Advertisement -

Related news

error: Content is protected !!