Tuesday, April 30, 2024
spot_imgspot_img
spot_imgspot_img

ಪುತ್ತೂರು: ಡಿವೈಡರ್ ಗೆ ಡಿಕ್ಕಿ ಹೊಡೆದು, ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಕಾರು!!

- Advertisement -G L Acharya panikkar
- Advertisement -
vtv vitla
vtv vitla

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್ ಬಳಿ ನಡೆದಿದೆ.

vtv vitla

ದರ್ಬೆ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಇನ್ನೊಂದು ಬದಿಗೆ ಜಂಪ್ ಆಗಿ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದೆ.

ಇದರಿಂದ ಕಾರಿನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರಿನಲ್ಲಿ ಮಹಿಳಾ ಚಾಲಕಿ ಮಾತ್ರ ಇದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!