Saturday, June 6, 2026
spot_imgspot_img
spot_imgspot_img

ಪುತ್ತೂರು: ತಾಲೂಕು ಮಟ್ಟದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

- Advertisement -
- Advertisement -

ಪುತ್ತೂರು: ಯುಜ್ಯತೇ ಇತಿಯೋಗ, ಯೋಗೋ ನಾಮ ಚಿತ್ತವೃತ್ತಿ ನಿರೋಧ, ಯೋಗದಿಂದ ದೇಹಾರೋಗ್ಯ, ದೀರ್ಘಾಯುಷ್ಯ, ಶಕ್ತಿ, ಸುಖ, ನೆಮ್ಮದಿ ಪ್ರಾಪ್ತಿಯಾಗುತ್ತದೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್.ಎಂ ಹೇಳಿದರು.

ಅವರು “ಮಾನವೀಯತೆಗಾಗಿ ಯೋಗ” ಎಂಬ ಧ್ಯೇಯದೊಂದಿಗೆ ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 21-06-2022ನೇ ಗುರುವಾರ ಶಾಲೆಯ ಯಾದವ ಶ್ರೀ ಸಭಾಂಗಣದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂದರ್ಭದಲ್ಲಿಆಶಯ ಭಾಷಣ ಮಾಡಿ ಮಾತನಾಡುತ್ತಿದ್ದರು.

ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪುತ್ತೂರು ನಗರ ಸಭಾಧ್ಯಕ್ಷ ಜೀವಂಧರ್‌ ಜೈನ್‌ ಯೋಗದ ಮೂಲಕ ದೇಹದ ರಕ್ಷಣೆ ಹಾಗೂ ದೇಶಗಳನ್ನು ಜೋಡಿಸುವ ಕಾರ್ಯ ನಡೆಯುತ್ತಿದೆ. ಭಾರತದಲ್ಲಿಆರಂಭವಾದ ಈ ಕಾರ್ಯ ಇಂದು ಪ್ರಪಂಚದ 175ಕ್ಕೂ ಅಧಿಕ ದೇಶಗಳಲ್ಲಿ ನಡೆಯುತ್ತಿದೆ ಎಂದರು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಸಿ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿಯ ಸಂಚಾಲಕ ರವಿನಾರಾಯಣ. ಎಂ ಶುಭಾಶಂಸನೆಗೈದರು. ವೇದಿಕೆಯಲ್ಲಿ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರಗೌಡ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯಕುಮಾರ್.ಎಂ, ಶಿಕ್ಷಣ ಸಂಯೋಜಕ ಹರಿಪ್ರಸಾದ್‌ ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ಪಂಚಾಯತ್‌ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸ್ವಾಗತಿಸಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಸತೀಶ್‌ ಕುಮಾರ್‌ ರೈ ವಂದಿಸಿದರು. ಸಹಶಿಕ್ಷಕರಾದ ಯಶೋದಾ ಮತ್ತು ವೆಂಕಟೇಶ್ ಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ನಡೆದ ಸಾಮೂಹಿಕ ಯೋಗ ಪ್ರದರ್ಶನವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನಮಿತಾ ಕೆ.ಕೆ ಮತ್ತು ಪವನ್‌ ಕುಮಾರ್‌ ನಡೆಸಿಕೊಟ್ಟರು.

ಪ್ರತಿಜ್ಞಾ ವಿಧಿ ನೆರವೇರಿಸಿದ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಭಾಸ್ಕರ ಗೌಡ ಇವರ ಮಾರ್ಗದರ್ಶನದಲ್ಲಿ ಗಿರೀಶ್, ದೀಪಕ್, ಆಶಾಲತಾ, ವಾಣಿಶ್ರೀ, ರಶ್ಮಿ ಯೋಗ ಪ್ರದರ್ಶನದಲ್ಲಿ ಸಹಕರಿಸಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರ ಜೊತೆಗೆ ಸರಕಾರಿ ಪದವಿಪೂರ್ವ ಕಾಲೇಜು, ಪುತ್ತೂರು ಹಾಗೂ ನೆಲ್ಲಿಕಟ್ಟೆ ಶಿವರಾಮ ಕಾರಂತ ಪ್ರೌಢಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು, ಶಿಕ್ಷಕೇತರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಹಕರಿಸಿದರು.

- Advertisement -

Related news

error: Content is protected !!