Friday, May 24, 2024
spot_imgspot_img
spot_imgspot_img

ಪುತ್ತೂರು: ದೇವಸ್ಥಾನವನ್ನು ಕೆಡವಿದ ಪ್ರಕರಣ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಎಂ ಕ್ಷಮೆಯಾಚನೆಗೆ ಒತ್ತಾಯ!

- Advertisement -G L Acharya panikkar
- Advertisement -

ಪುತ್ತೂರು: ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಈ ಕೃತ್ಯ ನಡೆಯಬಾರದಿತ್ತು, ಈ ಘಟನೆಗೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು, ಸರಕಾರದ ಗಮನಕ್ಕೆ ಬಾರದೆ ದೇವಸ್ಥಾನ ಕೆಡವಲಾಗಿದೆ ಎನ್ನುವ ಸಮಜಾಯಿಷಿ ಒಪ್ಪಲು ಸಾಧ್ಯವಿಲ್ಲ.

ಸರಕಾರ ಈ ಕೃತ್ಯದ ಬಗ್ಗೆ ಕ್ಷಮೆಯಾಚಿಸದೆ ಇದ್ದಲ್ಲಿ ಚುನಾವಣೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದರು.

- Advertisement -

Related news

error: Content is protected !!