Saturday, May 11, 2024
spot_imgspot_img
spot_imgspot_img

ಪುತ್ತೂರು: ಪುತ್ತಿಲರವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ; ಬೆಂಬಲಿಗರಿಂದ ಇಂದು ತುರ್ತು ಸಭೆ..? ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಕೇಸರಿ ಹಸ್ತ ಪಡೆಗಳಿಗೆ ಟಫ್‌ ಫೈಟ್‌..!

- Advertisement -G L Acharya panikkar
- Advertisement -

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎನ್ನುವ ಮಾಹಿತಿ ಕೈ ಕಮಲ ಕೂಟಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿತನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ ಅವಕಾಶ ನೀಡುವಂತೆ ಸಂಘ ಪರಿವಾರದ ಒಂದು ತಂಡ ತೀವ್ರ ಒತ್ತಡ ಹೇರಿತ್ತು.

ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು. ಆದರೆ ಟಿಕೆಟ್ ನಿರಾಸೆಯಿಂದ ಅರುಣ್ ಕುಮಾರ್‍ ಪುತ್ತಿಲ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಅನ್ನುವ ಮಾತುಗಳು ಕೇಳಿಬಂದಿವೆ..

ಅಮಿತ್ ಶಾ ಅವರು ಪುತ್ತೂರು ಭೇಟಿ ವೇಳೆ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಅಳವಡಿಸಿದ ಬ್ಯಾನರ್ ಕುರಿತಂತೆ ಶಾಸಕ ಸಂಜೀವ ಮಠಂದೂರು ಅವರು ಆಡಿದರೆನ್ನೆಲಾದ ಪದ ಅರುಣ್ ಪುತ್ತಿಲ ಅವರನ್ನು ಉದ್ದೇಶಿಸಿಯೇ ಹೇಳಿದಾಗಿತ್ತು ಎಂಬ ವಿಚಾರ ತೀವ್ರ ಗೊಂದಲ ಸೃಷ್ಟಿಸಿತ್ತು.. ಇದು ಅರುಣ್ ಪರವಾಗಿಯೂ ಅನುಕಂಪದ ವಾತಾವರಣ ಸೃಷ್ಟಿಸಿತ್ತು. ಈ ಬೆಳವಣಿಗೆಗಳಿಂದ ಅರುಣ್ ಹೆಸರು ಈ ಬಾರಿಯು ಮುನ್ನಲೆಗೆ ಬಂದಿತ್ತು.

ಎ.10 ರಂದು ರಾತ್ರಿ ಪ್ರಕಟವಾದ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಅರುಣ್ ಪುತ್ತಿಲ ಹೆಸರಿಲ್ಲದ ಹಿನ್ನೆಲೆಯಲ್ಲಿ ಅರುಣ್ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತುರ್ತು ಸಭೆ ಮಹತ್ವ ಪಡೆದಿದೆ.

- Advertisement -

Related news

error: Content is protected !!