- Advertisement -
- Advertisement -

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ ನಡೆಸಿದ್ದಾರೆ.
ಸುಮಾರು ನೂರಕ್ಕೂ ಅಧಿಕ ವಾಹನಗಳಲ್ಲಿ ತನಿಖಾ ದಳದ ಅಧಿಕಾರಿಗಳು ಗುಪ್ತವಾಗಿ ಆಗಮಿಸಿದ್ದು ವಿವಿಧೆಡೆ ಶಂಕಿತರಿಗೆ ಬಲೆ ಬೀಸಿದ್ದಾರೆ. ಈಗಾಗಲೇ ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ತು ಮಂದಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆ ನಡೆಸುತ್ತಿದ್ದ ತನಿಖೆಯನ್ನು ಇದೀಗ ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ. ಇದೀಗ ಕೊಲೆಗೆ ಸಹಕರಿಸಿದವರನ್ನು ಪುತ್ತೂರಿನ ದರ್ಬೆ ನಿರೀಕ್ಷಣಾ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಪ್ರವೇಶಿಸಲು ಮಾಧ್ಯಮದವರನ್ನು ನಿರ್ಬಂಧಿಸಲಾಗಿದೆ. ಭದ್ರತೆ ದೃಷ್ಟಿಯಲ್ಲಿ ನಿರೀಕ್ಷಣಾ ಮಂದಿರದ ಪ್ರವೇಶ ದ್ವಾರದಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.

- Advertisement -