Sunday, June 29, 2025
spot_imgspot_img
spot_imgspot_img

ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ನಳಿನ್ ಕುಮಾರ್ ಕಟೀಲ್, ತೇಜಸ್ವಿ ಸೂರ್ಯ, ಶೃತಿ ಸಾಥ್‌

- Advertisement -
- Advertisement -
vtv vitla

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಚುನಾವಣಾಧಿಕಾರಿ ಗಿರೀಶ್‌ ನಂದನ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ವತಿಯಿಂದ ಪುತ್ತೂರು ಪೇಟೆಯಲ್ಲಿ ಬೃಹತ್ ಮೆರವಣಿಗೆ ನಡೆಯಿತು.ಈ ಸಂದರ್ಭ ಪುತ್ತೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಪುತ್ತೂರಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮುಖ್ಯರಸ್ತೆಯಾಗಿ ತೆರೆದ ವಾಹನದಲ್ಲಿ ಸಾಗಿದ ಮೆರವಣಿಗೆಯಲ್ಲಿ ಚಲನಚಿತ್ರ ನಟಿ ಶೃತಿ, ಸಂಸದ ತೇಜಸ್ವಿ ಸೂರ್ಯ, ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಆಗಿರುವ ನಳಿನ್ ಕುಮಾರ್ ಕಟೀಲ್ ಮುಂತಾದವರು ಭಾಗಬಹಿಸಿದ್ದರು. ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!