- Advertisement -
- Advertisement -


ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್ ಪ್ರಮೀಳಾ ಡಿಸೋಜಾ (37) ಎಂದು ಗುರುತಿಸಲಾಗಿದೆ.
ಪ್ರಮೀಳಾ ಡಿಸೋಜಾ ಪುತ್ತೂರು ಕಸ್ಬಾ ಗ್ರಾಮದ ಸೈಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು. ಮೇ.30 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮಕ್ಕಳಿಗೆ ಬಿಸಿ ಊಟದ ಅಡುಗೆ ಮಾಡಿಕೊಂಡಿರುವಾಗ, ಅಡುಗೆ ಮನೆಯ ಬಾಗಿಲ ಬಳಿ ತಯಾರು ಮಾಡಿ ಇಟ್ಟಿದ್ದ ಸಾಂಬಾರ್ ಪಾತ್ರಗೆ ಕಾಲು ಜಾರಿ ಬಿದ್ದ ಪರಿಣಾಮ ಪಾತ್ರೆಯಲ್ಲಿದ್ದ ಬಿಸಿ ಬಿಸಿ ಸಾಂಬಾರ್ ಪ್ರಮೀಳಾ ಮೈ ಮೇಲೆ ಬಿದ್ದು, ಗಂಭೀರ ಗಾಯಗೊಂಡಿದ್ದರು. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- *ಪೆರುವಾಯಿ ಬದ್ರಿಯಾ ಜುಮಾ ಮಸೀದಿ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಮುಹಮ್ಮದ್ ಹಾಜಿ ದರ್ಖಾಸ್, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ದರಕಾಸ್ ಪೆರುವಾಯಿ
- ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ಬಿಸಿರೋಡ್ ಚಲೋ; ಹಿಂದೂ ಸಂಘಟನೆಯ ವಕೀಲರಾದ ಪ್ರಸಾದ್ ವಿರುದ್ದ ದೂರು ದಾಖಲು
- ನ್ಯಾಯಾಧೀಶರ ಕಾರು-ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಆಟೋ ಚಾಲಕ ಚಂದ್ರ ಮೃತ್ಯು
- ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ವ್ಯವಸ್ಥಾಪಕ ಕುಸುಮಾಧರ ಎಂ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರಿಂದ ಸನ್ಮಾನ
- ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ(ರಿ.) ಶಾಂತಿನಗರ ವಾರ್ಷಿಕ ಮಹಾಸಭೆ- ಪದಾಧಿಕಾರಿಗಳ ಆಯ್ಕೆ


- Advertisement -








