Saturday, April 27, 2024
spot_imgspot_img
spot_imgspot_img

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144 ನಿಷೇಧಾಜ್ಞೆ ಜಾರಿ

- Advertisement -G L Acharya panikkar
- Advertisement -
vtv vitla

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ.

ಡಿ.14ರ ರಾತ್ರಿ ಉಪ್ಪಿನಂಗಡಿಯಲ್ಲಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಸಹಾಯಕ ಆಯುಕ್ತರು ಈ ಆದೇಶ ಹೊರಡಿಸಿದ್ದು. ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕಿನಾದ್ಯಂತ ದಿನಾಂಕ:15/12/2021 ರಿಂದ ದಿನಾಂಕ:17/12/2011 ರ ಮಧ್ಯರಾತ್ರಿ 12:00 ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

ಈ ನಡುವೆ ಉಪವಿಭಾಗದ ನಾನಾ ಕಡೆ ಪಿ ಎಫ್ ಐ ನವರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಪುತ್ತೂರು ಉಪವಿಭಾಗಾಧಿಕಾರಿ ಹಾಗೂ ಉಪವಿಭಾಗ ದಂಡಾಧಿಕಾರಿ ಡಾ| ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

vtv vitla
vtv vitla
  • ನಿಷೇದಾಜ್ಞೆ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ,ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ, ಮತ್ತು ಸರಕಾರಿ ಕಛೇರಿ ಸುತ್ತಮುತ್ತು ಗುಂಪು ಸೇರಬಾರದು ಅಥವಾ ಗುಂಪು ಸೇರುವುದನ್ನು ನಿಷೇದಿಸಿದೆ.
  • ಯಾವುದೇ ಆಯುಧ, ಕೊಡುಗೋಲು,ಖರ ಭರ್ಚಿ,ಗದೆ, ಕೋಲು,ಚೂರಿ ದೊಡ್ಡ ಅಥವಾ ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಯಾವುದೇ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
  • ಯಾವುದೇ ಸಾರ್ವಜನಿಕ ಮೇರವಣಿಗೆ ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.
  • ಕಲ್ಲುಗಳನ್ನು ಒಟ್ಟುಗುಡಿಸುವುದು ಆಯುಧಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ.
  • ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ.
  • ಸಾರ್ವಜನಿಕ ಕೋಮು ಸೌಹರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು ಬೇಷ್ಠ ಮಾಡುವುದು , ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು, ಪತ್ರಿಕೆಗಳ ಪ್ರಕಟಣೆ ಮಾಡುವುದು ಅಥವಾ ವಸ್ತುಗಳ ಪ್ರದರ್ಶನ, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ, ಸಭ್ಯತನ ಸದಾಚಾರ, ಸಾರ್ಥಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅವರಾಧ ಎಸಗುವ ಮತ್ತು ಪ್ರೇರೆಪಿಸುವ ಕ್ರಮವನ್ನು ನಿಷೇಧಿಸಿದೆ.
vtv vitla
- Advertisement -

Related news

error: Content is protected !!