Sunday, June 29, 2025
spot_imgspot_img
spot_imgspot_img

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಸ್ಸಿಗೆ ಡಿಕ್ಕಿ: ಬೈಕ್ ಸವಾರ ವೀರಮಂಗಲದ ಭರತ್‌ರಾಜ್ ಮೃತ್ಯು

- Advertisement -
- Advertisement -

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಸಿಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನ್ಲಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಮೃತಪಟ್ಟಿದ್ದಾರೆ.


ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ ಜಯದೀಪ್ ಅವರ ಪುತ್ರ ಧನುಷ್(24ವ) ಮತ್ತು ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ ಭರತ್ ರಾಜ್ ಗೌಡ(22ವ)ರವರು ಡ್ಯೂಕ್ ಬೈಕ್‌ನಲ್ಲಿ ಬಂದಿದ್ದು ಪರ್ಲಡ್ಕ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿ ಭಾಗಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ತಲೆಗೆ ಗಂಭೀರ ಗಾಯಗೊಂಡ ಭರತ್ರಾಜ್ ಗೌಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂಧಿಸದ ಭರತ್‌ರಾಜ್ ಮೃತಪಟ್ಟಿದ್ದಾರೆ. ಬೈಕ್ನಲ್ಲಿದ್ದ ಇನ್ನೋರ್ವ ಗಾಯಾಳು ಧನುಷ್ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಪಘಾತ ನಡೆದ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ದ.ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರು ತಕ್ಷಣ ಗಾಯಳುವನ್ನು ತನ್ನ ಕಾರಿನಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಧನುಷ್ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

astr
- Advertisement -

Related news

error: Content is protected !!