Saturday, June 20, 2026
spot_imgspot_img
spot_imgspot_img

ಪುತ್ತೂರು: ಮಹಿಳೆಯೊಂದಿಗೆ ಇರುವ ಫೋಟೋ ವೈರಲ್ ಪ್ರಕರಣ; ಶಾಸಕರ ಆಪ್ತ ಸಹಾಯಕನಿಂದ ಸೈಬರ್‌ ಕ್ರೈಂ ಠಾಣೆಗೆ ದೂರು

- Advertisement -
- Advertisement -

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜೊತೆಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತು ಶಾಸಕರ ಆಪ್ತ ಸಹಾಯಕ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಶಾಸಕರ ಆಪ್ತ ಸಹಾಯಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?
ಶಾಸಕ ಸಂಜೀವ ಮಠಂದೂರು ಅವರನ್ನು ಹೋಲುವ ಫೋಟೋಗಳನ್ನು ಮಹಿಳೆಯ ಫೋಟೋದೊಂದಿಗೆ ಜೋಡನೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಬಗ್ಗೆ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರ ಆಪ್ತ ಸಹಾಯಕ ವಸಂತ್ ಎಸ್ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!