Sunday, April 28, 2024
spot_imgspot_img
spot_imgspot_img

ಪುತ್ತೂರು : ಯುವತಿಯ ಕೊಲೆ ಪ್ರಕರಣ ; ಕೃತ್ಯಕ್ಕೆ ಬಳಸಿದ ಆಯುಧ, ಸ್ಕೂಟರ್ ಪೊಲೀಸರ ವಶಕ್ಕೆ

- Advertisement -G L Acharya panikkar
- Advertisement -

ಪುತ್ತೂರು : ಮುಂಡೂರು ಗ್ರಾಮದ ಕಂಪ ಬದಿಯಡ್ಕ ಎಂಬಲ್ಲಿನ ದಿ.ಗುರುವ ಎಂಬವರ ಪುತ್ರಿ ಜಯಶ್ರೀ (23ವ) ಅವರನ್ನು ಜ.17ರಂದು ಬೆಳಿಗ್ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿ ಸುಳ್ಯ ತಾಲೂಕಿನ ಕನಕಮಜಲಿನ‌ ಉಮೇಶ್ ಎಂಬಾತನನ್ನು ಜ.18ರಂದು ಬಂಧಿಸಿದ್ದಾರೆ.

ಕನಕಮಜಲು ಗ್ರಾಮದ ಅಂಗಾರ ಎಂಬವರ ಪುತ್ರ ಉಮೇಶ್ (24ವ) ಬಂಧಿತ ಆರೋಪಿ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಆತ ಕೊಲೆ ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಸ್ಕೂಟರ್ ವಶಕ್ಕೆ ಪಡೆದು ಕೊಂಡಿದ್ದಾರೆ. ಆತನಿಂದ ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಕೊಲೆ ಮಾಡಿದ ಸ್ಥಳಕ್ಕೆ ಬರಲು ಬಳಸಿದ ಸ್ಕೂಟರ್ ಅನ್ನು‌ ಪೊಲೀಸರು ವಶಕ್ಕೆ ಪಡೆದು‌ಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಮಾನ್ಯ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನಾವಣೆ ಭಗವಾನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರ್ಮಪ್ಪ ಎನ್.ಎಮ್, ಪುತ್ತೂರು ಪೊಲೀಸ್ ಉಪಾಧೀಕ್ಷಕರಾದ ಡಾ.ವೀರಯ್ಯ ಹಿರೇಮಠ್ ರವರ ಸೂಕ್ತ ಮಾರ್ಗದರ್ಶನ ಮತ್ತು ನಿರ್ದೇಶನದಂತೆ ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕರಾದ ಶ್ರೀ ರವಿ ಬಿ.ಎಸ್ ರವರು ಮತ್ತು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕ ಉದಯರವಿ ಎಮ್. ವೈ., ಎ.ಎಸ್.ಐ ಮುರುಗೇಶ್, ಪೊಲೀಸ್ ಸಿಬ್ಬಂದಿಯವರಾದ, ಪ್ರವೀಣ ರೈ, ಹರೀಶ್ ಜಿ.ಎನ್., ಅದ್ರಾಮ, ಧರ್ಣಪ್ಪ, ಸಲೀಂ, ಶಿವಾನಂದ, ದೇವರಾಜ್, ಸತೀಶ್, ವರ್ಗೀಸ್, ಹರ್ಷಿತ್, ಗಿರೀಶ್ ರೈ, ಸದ್ದಾಂ, ಹರೀಶ್ ನಾಯ್ಕ್, ಬಿ., ನಿತಿನ್‍ಕುಮಾರ್, ಅಡಿವೆಪ್ಪ ಸಂಗೊಳ್ಳಿ, ಲೋಕೇಶ್, ಗಾಯತ್ರಿ-ಇವರನ್ನೊಳಗೊಂಡ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!