Friday, June 5, 2026
spot_imgspot_img
spot_imgspot_img

ಪುತ್ತೂರು: ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!

- Advertisement -
- Advertisement -

ಪುತ್ತೂರು: ಇಲ್ಲಿನ ಸಾಲ್ಮರ ಕಟ್ಟೆ ರೈಲ್ವೇ ಟ್ರ್ಯಾಕ್ ಬಳಿಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 45-55 ಎಂದು ಅಂದಾಜಿಸಲಾಗಿದೆ. ಅಲ್ಲದೇ ಬಾವಿಯ ಕಟ್ಟೆಯ ಮೇಲೆ ವ್ಯಕ್ತಿಯ ಚಪ್ಪಲಿ ಸಹ ಪತ್ತೆಯಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಎರಡು, ಮೂರು ದಿನಗಳ ಹಿಂದೆಯೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!