Sunday, June 14, 2026
spot_imgspot_img
spot_imgspot_img

ಪುತ್ತೂರು: ವಸತಿ ಸಮುಚ್ಛಯದ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಗಂಭೀರ

- Advertisement -
- Advertisement -

ಪುತ್ತೂರು: ಇಲ್ಲಿನ ಬೊಳುವಾರಿನಲ್ಲಿರುವ ವಸತಿ ಸಮುಚ್ಛಯದ ಮಹಡಿ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡಿರುವ ಘಟನೆ ಆ.5ರಂದು ಸಂಜೆ ನಡೆದಿದೆ.

ಸುದಾನ ಪ್ರೌಢಶಾಲಾ 9ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಎಂಬವರು ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡವರಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ಮನೋಹರ್ ರೈ ಎಂಬವರ ಮಗ ಸುಶಾನ್ ರೈ ವಸತಿ ಸಮುಚ್ಛಯದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭಿಸಬೇಕಿದೆ.

- Advertisement -

Related news

error: Content is protected !!