Saturday, June 28, 2025
spot_imgspot_img
spot_imgspot_img

ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ

- Advertisement -
- Advertisement -

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ.

ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಬೀಸ ಅವರೇ ಬೆಂಕಿ ಹಚ್ಚಿಕೊಂಡರೆ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತೇ ಎಂಬ ವಿಚಾರ ತನಿಖೆ ನಂತರವಷ್ಟೇ ತಿಳಿಯಬೇಕಿದೆ. ನಬೀಸ ಅವರು ಅಲ್ಪ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ. ಮೃತರು ಪತಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!