Thursday, April 25, 2024
spot_imgspot_img
spot_imgspot_img

ಪುತ್ತೂರು: ಹರ್ಷ ಕುಟುಂಬಕ್ಕೆ ಒಂದು ತಿಂಗಳ ಗೌರವ ವೇತನ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

- Advertisement -G L Acharya panikkar
- Advertisement -

ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಒಂದು ತಿಂಗಳ ಗೌರವ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶಣೈ ಅವರು ಕೂಡಾ ತಮ್ಮ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಪುತ್ತೂರಿನಲ್ಲಿ ಪತ್ರಿಕಾ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೃತ ಹರ್ಷ ಬಜರಂಗದಳದ ಕಾರ್ಯಕರ್ತರಾಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದಷ್ಟು ಮುಸ್ಲಿಂ ಮತಾಂದ ವ್ಯಕ್ತಿಗಳು ಸರಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಹಿಂದು ಕಾರ್ಯಕರ್ತರ ಕೊಲೆಯನ್ನು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಮತಾಂದ ವ್ಯಕ್ತಿಗಳನ್ನು ಮುಂದಿನ ದಿನಗಳಲ್ಲಿ ಜೈಲಿಗೆ ಹಾಕುವ ಕೆಲಸವನ್ನು ನಮ್ಮ ಗೃಹಮಂತ್ರಿ ಅರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದು, ಜೊತೆಗೆ ಒಟ್ಟು ಘಟನೆಯ ಹಿಂದೆ ಯಾರಾರ ಕೈವಾಡ ಇದೆ ಎಂದು ಎನ್.ಐ. ತನಿಖೆ ಮಾಡಲು ಒತ್ತಾಯ ಮಾಡುತ್ತಿದ್ದೇವೆ.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಹರಿಪ್ರಸಾದ್ ಯಾದವ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!