Sunday, June 14, 2026
spot_imgspot_img
spot_imgspot_img

ಪುತ್ತೂರು: ಹಿಂದೂ ಯುವತಿಗೆ ಅನ್ಯಕೋಮಿನ ಯುವಕ ಚಾಕಲೇಟ್ ನೀಡಿದ ಎಂದು ತಂಡಗಳ ನಡುವೆ ಮಾತಿನ ಚಕಮಕಿ

- Advertisement -
- Advertisement -

ಪುತ್ತೂರು: ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕ ಚಾಕಲೇಟ್ ನೀಡಿದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಇಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಜು.14 ರಂದು ಅನ್ಯಕೋಮಿನ ಯುವಕ ಹಿಂದೂ ಯುವತಿಗೆ ಚಾಕಲೇಟ್ ನೀಡಿದ್ದ ಎನ್ನಲಾಗಿದ್ದು, ಈ ಬಗ್ಗೆ ನಿನ್ನೆಯೂ ಮಾತಿನ ಚಕಮಕಿ ನಡೆದಿದೆ. ಇಂದು ಮತ್ತೆ ಬಸ್ ನಿಲ್ದಾಣದಲ್ಲಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ.

ಘಟನೆ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು ಎರಡು ತಂಡದವರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!