Monday, May 6, 2024
spot_imgspot_img
spot_imgspot_img

ಪುತ್ತೂರು: 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

- Advertisement -G L Acharya panikkar
- Advertisement -

ಪುತ್ತೂರು: ಸುಮಾರು 26 ವರ್ಷದಿಂದ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಜೊಡ್ ಸನ್ ಎನ್ನಲಾಗಿದೆ.

ಘಟನೆಯ ವಿವರ:

ಆರೋಪಿ 1955ರಲ್ಲಿ ಪುತ್ತೂರು ಪಡೀಲ್‌ನಲ್ಲಿ ಮನೆಯೊಂದರಲ್ಲಿ ನೀರು ಕೇಳುವ ನೆಪದಲ್ಲಿ ದರೋಡೆ ನಡೆಸಿದ್ದು, ಬಳಿಕ ಆರೋಪಿ ಜೊಡ್‌ಸನ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಜಾಮೀನು ಪಡೆದ ಬಳಿಕ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿನ ವಿಚಾರಣೆ ವೇಳೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. 

ಖಚಿತ ಮಾಹಿತಿ ಮೇರೆಗೆ ಪೊಲೀಸರು ಕೇರಳದ ಎರ್ನಾಕುಲಂ ವರುಪುಝ ಪುತ್ತನ್ ಪಲ್ಲಿ ಕೈತಡ್ಕ ಚಾಲಿ ಎಂಬಲ್ಲಿ ಆರೋಪಿ ಜೊಡ್ ಸನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದುಬಂದಿದೆ.

ಡಿವೈಎಸ್ ಪಿ ಡಾ. ಗಾನಾ ಪಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವನೆ, ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರ ಮಾರ್ಗದರ್ಶನದಂತೆ, ಪುತ್ತೂರು ನಗರ ಪೊಲೀಸ್ ಠಾಣೆ ನಿರೀಕ್ಷಕ ಗೋಪಾಲ್ ನಾಯ್ಕ್ ಅವರ ನಿರ್ದೇಶನದಲ್ಲಿ ಎ.ಎಸ್.ಐ ಚಂದ್ರ, ಹೆಡ್‌ಕಾನ್‌ಸ್ಟೇಬಲ್‌ಗಳಾದ ಪರಮೇಶ್ವರ ಮತ್ತು ಜಗದೀಶ್ ಅವರು ಆರೋಪಿಯನ್ನು ಸೆ.27ರಂದು ಕೇರಳದ ಎರ್ನಾಕುಲಂ ವರುಪುರು ಪುತ್ತನ್ ಕೈತಡ್ಕಚಾಲಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!