Tuesday, April 30, 2024
spot_imgspot_img
spot_imgspot_img

ಪೊಲೀಸ್‌ ಸ್ಟೇಷನ್‌ ಗಳಲ್ಲಿ ಇನ್ನುಮುಂದೆ ಬರ್ತ್‌‌ಡೇ ಆಚರಣೆ ಹಾಗೂ ಹಲವಾರು ಕಾರ್ಯಕ್ರಮಗಳಿಗೆ ಬೀಳಲಿದೆ ಬ್ರೇಕ್!

- Advertisement -G L Acharya panikkar
- Advertisement -

ಬೆಂಗಳೂರು: ಪೊಲೀಸ್‌ ಸ್ಟೇಷನ್‌ ಗಳಲ್ಲಿ ಇನ್ನುಮುಂದೆ ಬರ್ತ್‌‌ಡೇ ಆಚರಣೆ, ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗಾವಣೆ, ಮುಂಬಡ್ತಿ ವೇಳೆಯಲ್ಲಿ ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಗಳಿಗೆ ಕಡಿವಾಣ ಬೀಳಲಿದೆ.

ಇತ್ತೀಚಿನ ದಿನಗಳಲ್ಲಿ ಪೊಲೀಸರು ಖಾಸಗಿ ಸಮಾರಂಭಗಳಲ್ಲಿ ಭಾಗಿಯಾಗಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದು, ಅದರಲ್ಲೂ ಸಮಾಜ ಘಾತುಕ ವ್ಯಕ್ತಿಗಳ ಕಾರ್ಯಕ್ರಮದಲ್ಲಿ ಪೊಲೀಸರು ಭಾಗಿಯಾಗುವುದು, ಠಾಣೆಗಳಲ್ಲಿ ಹುಟ್ಟು ಹಬ್ಬ, ವಾರ್ಷಿಕೋತ್ಸವಗಳ ಆಚರಣೆ ಮಾಡಿಕೊಂಡು ಸಾರ್ವಜನಿಕವಾಗಿ ಕೂಡ ಟೀಕೆಗೆ ಗುರಿಯಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ; 6 ಕೋಳಿ, ನಗದು ಹಾಗೂ ದ್ವಿಚಕ್ರ ವಾಹನ ಸಹಿತ ನಾಲ್ವರು ವಶಕ್ಕೆ

ಅಲ್ಲದೇ ಪೊಲೀಸ್‌ ಅಧಿಕಾರಿಗಳು ಸಮಾಜಘಾತುಕ ವ್ಯಕ್ತಿಗಳ ಜೊತೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸದೆ ಅಂತರ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದರ ಜೊತೆಗೆ ಪೊಲೀಸ್‌ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಪ್ರವೀಣ್ ಸೂದ್ ಖಡಕ್ ಸೂಚನೆ ನೀಡಿದ್ದಾರೆ.

driving

ರೌಡಿಶೀಟರ್, ಸಮಾಜ ಘಾತುಕ ವ್ಯಕ್ತಿಗಳು, ಅಪರಾಧ ಹಿನ್ನೆಲೆಯುಳ್ಳವರ ಜೊತೆ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ರೀತಿಯ ಸಂಬಂಧ ಹೊಂದಿರುವಂತಿಲ್ಲ. ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಸೇರಿ ಖಾಸಗಿ ಕಾರ್ಯಕ್ರಮ ಆಚರಣೆಗೆ ಕಡಿವಾಣ ಹಾಕಬೇಕೆಂದು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಡಿಜಿಐಜಿಪಿಯವರು ಮಾರ್ಗಸೂಚಿ ಹೊರಡಿಸಿದ್ದಾರೆ.

ಇನ್ನು ಸ್ಟೇಷನ್‌ಗೆ ಹೊಸದಾಗಿ ಬರುವ ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗಾವಣೆ, ಮುಂಬಡ್ತಿ ವೇಳೆ ಸ್ವಾಗತ ಮತ್ತು ಬೀಳ್ಕೊಡುಗೆ ಕಾರ್ಯಕ್ರಮಗಳಿಗೆ ಕಡಿವಾಣ ಹಾಕುವ ಜೊತೆಗೆ ಈ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಹೊರತುಪಡಿಸಿ ಖಾಸಗಿ ವ್ಯಕ್ತಿಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಆ.4ರಂದು ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳ ಕುರಿತು ಮಾಹಿತಿ ಕಾರ್ಯಗಾರ

ಖಾಸಗಿ ಕಾರ್ಯಕ್ರಮಗಳಲ್ಲಿ ಪೊಲೀಸರು ಸಮವಸ್ತ್ರವನ್ನು ಧರಿಸುವಂತಿಲ್ಲ. ಹಿರಿಯ ಅಧಿಕಾರಿಗಳ ಅನುಮತಿ ಇಲ್ಲದೆ ಸಭೆ ಸಮಾರಂಭಗಳಿಗೆ ಸಿಬ್ಬಂದಿಯಿಂದ ಹಣ ಸಂಗ್ರಹಿಸುವಂತಿಲ್ಲ‌ ಎಂದು ಸೂಚಿಸಿದ್ದಾರೆ.

- Advertisement -

Related news

error: Content is protected !!