Sunday, June 7, 2026
spot_imgspot_img
spot_imgspot_img

ಪೊಲೀಸ್ ಕಾನ್‌ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ…!!

- Advertisement -
- Advertisement -

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದೆ.

ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೇದೆ ಪೂರ್ಣೇಶ್ ಎಂಬವರ ಶವ ಪತ್ತೆ ಆಗಿದೆ. ಪೂರ್ಣೇಶ್‌ ಅವರ ತಲೆಯ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಗುಂಬೆ, ತೀರ್ಥಹಳ್ಳಿ, ಮಾಳೂರು, ಕುಂಸಿಯಲ್ಲಿ ಪೂರ್ಣೇಶ್ ಸೇವೆ ಸಲ್ಲಿಸಿದ್ದರು. ಆದರೆ ಇತ್ತೀಚಿಗೆ ಮದ್ಯ ವ್ಯಸನಿಯಾಗಿದ್ದ ಪೂರ್ಣೇಶ್​, ಕೆಲಸದಿಂದ ವಜಾಗೊಂಡಿದ್ದರು ಎಂದು ತಿಳಿದುಬಂದಿದೆ.

ಶುಕ್ರವಾರ ತಡರಾತ್ರಿ ಹತ್ಯೆ ನಡೆದಿರುಬಹುದೆಂದು ಅಂದಾಜಿಸಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವೈಯಕ್ತಿಕ ಕಲಹದಿಂದಾಗಿ ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ. ಸದ್ಯ ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!