Sunday, June 21, 2026
spot_imgspot_img
spot_imgspot_img

ಪೊಲೀಸ್ ಗುಂಡೇಟಿಗೆ ಶಂಕಿತ ಜಾನುವಾರು ಕಳ್ಳಸಾಗಾಣಿಕೆದಾರ ಬಲಿ

- Advertisement -
- Advertisement -

ಧುಬ್ರಿ​: ಅಸ್ಸಾಂನ ಧುಬ್ರಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಾಣಿಕೆದಾರನೊಬ್ಬ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಖಚಿತ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ಸಪಟಗ್ರಾಮ್ ಪ್ರದೇಶದಲ್ಲಿ ಶನಿವಾರ ರಾತ್ರಿ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದ್ದಾರಾದರೂ, ವಾಹನ ವೇಗವಾಗಿ ಚಲಿಸಿತು. ಹೀಗಾಗಿ ವಾಹನವನ್ನು ಪೊಲೀಸರು ಬೆನ್ನಟ್ಟಿ ಹೊರಟರು. ಈ ವೇಳೆ ಕಾರಿನಲ್ಲಿದ್ದವರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದರು. ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದಾಗ ವಾಹನದಲ್ಲಿರುವ ಓರ್ವನಿಗೆ ಗುಂಡು ತಗುಲಿತ್ತು. ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ವಾಹನದಲ್ಲಿದ್ದ ಮೂವರ ಪೈಕಿ ಓರ್ವ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೊಬ್ಬ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರತ್ಯೇಕ ಘಟನೆಯೊಂದರಲ್ಲಿ ನಾಗಾಂವ್ ಜಿಲ್ಲೆಯ ಡೊಬೋಕಾದಲ್ಲಿ ಶಂಕಿತ ಡಕಾಯಿತನೋರ್ವ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಆತನನ್ನು ಶನಿವಾರ ಬಂಧಿಸಲಾಗಿದ್ದು, ನಂತರ ಗುಪ್ತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ತಡರಾತ್ರಿ ಆತನನ್ನು ಕರೆದೊಯ್ಯಲಾಯಿತು. ಈ ವೇಳೆ ಆತ ಕಾನ್‌ಸ್ಟೆಬಲ್‌ರನ್ನು ದೂರ ತಳ್ಳಿ ಓಡಲು ಪ್ರಯತ್ನಿಸಿದ್ದ. ಈ ವೇಳೆ ಆತ ತಪ್ಪಿಸಿಕೊಳ್ಳದಂತೆ ತಡೆಯುವ ಸಲುವಾಗಿ ಗುಂಡು ಹಾರಿಸಲಾಯಿತು. ಗುಂಡು ಆತನ ಬಲಗಾಲಿಗೆ ತಗುಲಿ ಗಾಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!