Friday, March 29, 2024
spot_imgspot_img
spot_imgspot_img

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನ; 14 ಮಂದಿ ಅರೆಸ್ಟ್!

- Advertisement -G L Acharya panikkar
- Advertisement -

ಬೆಳಗಾವಿ: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ, ಭಾನುವಾರ ನಡೆದ ಲಿಖಿತ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.

ನೇಮಕಾತಿ ಪರೀಕ್ಷೆಯ ವೇಳೆ ಬ್ಲೂಟೂತ್ ಸಾಧನ ಬಳಸಿಕೊಂಡು ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್ಥಿಗಳು ಹಾಗೂ ಇದಕ್ಕೆ ಸಹಕರಿಸಿದ 12 ಮಂದಿ ಸೇರಿದಂತೆ 14 ಮಂದಿಯನ್ನು ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

ರಾಮತೀರ್ಥ ಪಟ್ಟಣದ ಕೊಠಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಕಲು ಮಾಡಲು ಸಹಾಯ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಮಾಸ್ಟರ್ ಕಾರ್ಡ್, 19 ಬ್ಲೂಟೂತ್, 33 ಮೊಬೈಲ್, 1 ಲ್ಯಾಪ್ ಟಾಪ್ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!