Monday, June 22, 2026
spot_imgspot_img
spot_imgspot_img

ಪೊಲೀಸ್ ವಾಹನ ಢಿಕ್ಕಿ ಹೊಡೆದು ಭಾರತ ಮೂಲದ ಯುವತಿ ಅಮೇರಿಕಾದಲ್ಲಿ ಮೃತ್ಯು

- Advertisement -
- Advertisement -

ವಾಷಿಂಗ್ಟನ್ : ಸಿಯಾಟಲ್ ಪೊಲೀಸ್ ಗಸ್ತು ವಾಹನ ಢಿಕ್ಕಿ ಹೊಡೆದು ಭಾರತ ಮೂಲದ 23 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ನಡೆದಿದೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂದುಲಾ ಮೃತ ಯುವತಿ. ಈಕೆ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿದ್ಯಾರ್ಥಿನಿಯಾಗಿದ್ದಳು ಎಂದು ವರದಿಯಾಗಿದೆ.

ಸೋಮವಾರ ರಾತ್ರಿ ಘಟನೆ ನಡೆದಿದ್ದು, ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!