Friday, April 19, 2024
spot_imgspot_img
spot_imgspot_img

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್​ನ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಲು ದೆಹಲಿಯಿಂದ ಅಹಮದಾಬಾದ್​ಗೆ ಹೊರಟಿದ್ದಾರೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್​​ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಮಧ್ಯಾಹ್ನ 3 ಗಂಟೆಯ ವೇಳೆಗೆ ದೊರೆತ ಮಾಹಿತಿಗಳ ಪ್ರಕಾರ, ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ.

- Advertisement -

Related news

error: Content is protected !!