Monday, May 13, 2024
spot_imgspot_img
spot_imgspot_img

ಪ್ರಧಾನಿ ಮೋದಿ ಮಹತ್ವದ ಸಭೆ; ಅಫ್ಘಾನ್​ನಿಂದ​ ಹಿಂದೂ, ಸಿಖ್ಖರ ಸುರಕ್ಷಿತ ಸ್ಥಳಾಂತರಕ್ಕೆ ಮೋದಿ ಸೂಚನೆ

- Advertisement -G L Acharya panikkar
- Advertisement -

ನವದೆಹಲಿ: ಅಫ್ಘಾನ್​ ಸ್ಥಿತಿಗತಿ ಕುರಿತು ಪ್ರಧಾನಿ ಮೋದಿ ತುರ್ತು ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಫ್ಘಾನ್​ನಿಂದ​ ಹಿಂದೂ, ಸಿಖ್ಖರ ಸುರಕ್ಷಿತ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸುರಕ್ಷಿತವಾಗಿ ವಾಪಸ್​ ಕರೆತರಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದ್ದು ಅಫ್ಘಾನ್​​ ಅಲ್ಪಸಂಖ್ಯಾತರಿಗೆ ಭಾರತ ಸಹಾಯ ಹಸ್ತ ಚಾಚಲಿದೆ ಎಂದು ಮೋದಿ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನದ ಸ್ಥಿತಿಗತಿ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಇಲಾಖೆ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಜೈ ಶಂಕರ್ ಭಾಗಿಯಾಗಿದ್ದರು.

ತಾಲಿಬಾನ್ ಸರ್ಕಾರದ ಜೊತೆಗೆ ಚೀನಾ ಸರ್ಕಾರ ಸ್ನೇಹ ಸಂಬಂಧ ಬೆಳೆಸುವುದಾಗಿ ಹೇಳಿದೆ. ಇನ್ನು ಪಾಕಿಸ್ತಾನದಲ್ಲೂ ಸಾವಿರಾರು ಸಂಖ್ಯೆಯಲ್ಲಿ ತಾಲಿಬಾನಿಗಳು ಐಎಸ್​ಐ ಸಂಘಟನೆಯ ಬಳಿ ಟ್ರೈನಿಂಗ್ ಪಡೆಯುತ್ತಿದ್ದಾರೆ. ಇದರಿಂದ ಭಾರತದ ಭದ್ರತೆಗೂ ಭವಿಷ್ಯದಲ್ಲಿ ಸವಾಲುಗಳು ಎದುರಾಗುವ ಸಾಧ್ಯತೆಗಳಿದ್ದು ಈ ವಿಚಾರವಾಗಿಯೂ ಸಹ ಮಹತ್ವದ ಸಭೆಯಲ್ಲಿ ಚರ್ಚೆಗಳಾಗಿವೆ ಎನ್ನಲಾಗಿದೆ.

driving
- Advertisement -

Related news

error: Content is protected !!