Friday, May 3, 2024
spot_imgspot_img
spot_imgspot_img

ಪ್ರಧಾನಿ ಮೋದಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾತುಕತೆ

- Advertisement -G L Acharya panikkar
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಸಂಸತ್ ಸಂಕೀರ್ಣದಲ್ಲಿ ಬುಧವಾರ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ಚರ್ಚೆ ಬಳಿಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ.

ಆದರೆ ಪ್ರಧಾನಿಯೊಂದಿಗೆ ಮಾತುಕತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶರದ್‌ ಪವಾರ್‍, ಲಕ್ಷದ್ವೀಪಕ್ಕೆ ಸಂಬಂಧಪಟ್ಟ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

vtv vitla
vtv vitla

ಇದಕ್ಕೂ ಮುನ್ನ ಮಂಗಳವಾರ ಸಂಜೆ ಶರದ್ ಪವಾರ್ ಅವರ ನಿವಾಸದಲ್ಲಿ ನಡೆದ ಮಹಾರಾಷ್ಟ್ರದ ಶಾಸಕರು ಮತ್ತು ಇತರ ನಾಯಕರ ಸಭೆಯಲ್ಲಿ ಹಲವು ನಾಯಕರು ಭಾಗವಹಿಸಿದ್ದಾರೆ. ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ-ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟದ ಶಾಸಕರು, ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ನಿತಿನ್ ಗಡ್ಕರಿ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ನವದೆಹಲಿಯ ಜನಪಥ್‌ನಲ್ಲಿರುವ ಶರದ್ ಪವಾರ್ ಅವರ ನಿವಾಸ 6 ರಲ್ಲಿ ನಡೆದ ಔತಣಕೂಟದಲ್ಲಿ ಶಿವಸೇನೆ ಸಂಸದ ಸಂಜಯ್ ರೌತ್ ಅವರು ಪಾಲ್ಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

- Advertisement -

Related news

error: Content is protected !!