Sunday, April 28, 2024
spot_imgspot_img
spot_imgspot_img

ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಾಂತ ಹಿಂಸಾಚಾರ, ಪ್ರತಿಭಟನೆ; ರಾಜ್ಯದಲ್ಲಿ ಹೈ ‌ಅಲರ್ಟ್ ಘೋಷಣೆ

- Advertisement -G L Acharya panikkar
- Advertisement -

ಬೆಂಗಳೂರು: ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ದೇಶಾದ್ಯಂತ ಹಿಂಸಾಚಾರ, ಪ್ರತಿಭಟನೆ ಭುಗಿಲೆದ್ದಿರುವ ಕಾರಣ ರಾಜ್ಯದಲ್ಲೂ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಬಹುದೆಂಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ.

ವಿಮಾನ ನಿಲ್ದಾಣ, ಬಂದರುಗಳು, ಪ್ರಮುಖ ಚೆಕ್‍ಪೋಸ್ಟ್ ಗಳು, ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್, ಕೆಂಪೇಗೌಡ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಮೈಸೂರು ಅರಮನೆ, ಗಣ್ಯರ ನಿವಾಸಗಳು, ಪ್ರವಾಸಿತಾಣಗಳು ಸೇರಿದಂತೆ ಮತ್ತಿತರ ಕಡೆ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖವಾಗಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಭಟ್ಕಳ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

vtv vitla

ಬೆಂಗಳೂರಿನ ಇಸ್ಕಾನ್, ಮೈಸೂರು ಅರಮನೆ, ಐಟಿಬಿಟಿ ಕಂಪನಿಗಳು, ಮಾಲ್‍ಗಳು, ಮಾರುಕಟ್ಟೆ, ಜನಸಂದಣಿ ಇರುವ ಪ್ರದೇಶಗಳು ಮತ್ತಿತರ ಕಡೆ ಈಗಾಗಲೇ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು, ಕಾರವಾರ ಬಂದರುಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಅನುಮಾನಸ್ಪದವಾಗಿ ತಿರುಗಾಡುವವರ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ಅಗತ್ಯ ಕಂಡುಬಂದರೆ ಅಂಥವರನ್ನು ತಕ್ಷಣವೇ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವಂತೆ ಖುದ್ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ.

ಬಿಜೆಪಿಯ ನಾಯಕಿ ನೂಪುರ್ ಶರ್ಮಾ

ಬಿಜೆಪಿಯ ನಾಯಕಿ ನೂಪುರ್ ಶರ್ಮಾ ಖಾಸಗಿ ಸುದ್ದಿವಾಹಿಯ ಚರ್ಚೆಯ ಸಂದರ್ಭದಲ್ಲಿ ಮಹಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿರುವುದು ಮುಸ್ಲಿಂ ಸಮುದಾಯದವರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಬಿಜೆಪಿ ನಾಯಕಿಯ ಹೇಳಿಕೆಗೆ ವಿರೋಧ ಹಾಗೂ ಖಂಡನೆಗಳು ವ್ಯಕ್ತವಾಗುತ್ತಿವೆ.

ಇದೀಗ ದೇಶದಲ್ಲಿಯೂ ಕಿಚ್ಚು ಹೆಚ್ಚಾಗಿದ್ದು, ಎಲ್ಲೆಡೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಉತ್ತರಪ್ರದೇಶ, ದೆಹಲಿ, ತಲಂಗಾಣ, ಮಹಾರಾಷ್ಟ್ರ ಸೊಲ್ಲಾಪುರ ಸೇರಿದಂತೆ ದೇಶದ ಹಲವೆಡೆ ಸಾವಿರಾರು ಮುಸ್ಲಿಂ ಸಮುದಾಯದ ಜನರು ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!