- Advertisement -
- Advertisement -


ಪ್ರವಾಸಕ್ಕೆಂದು ಬೆಂಗಳೂರಿನ ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾಗಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದ್ದರೆ, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಈ ದುರಂತ ಸಂಭವಿಸದೆ.
ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ಈ ಅವಘಡ ನಡೆದಿದೆ. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್‌ಗೆ ಬಂದಿದ್ದ ಈ ವಿದ್ಯಾರ್ಥಿಗಳು ಇಲ್ಲಿ ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು. ಆಗ ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾಗಿದ್ದು, ಆ ಪೈಕಿ ಅರ್ಜುನ್, ಚೈತ್ರಶ್ರೀ ಶವ ಪತ್ತೆಯಾಗಿದೆ. ನಾಪತ್ತೆ ಆಗಿರುವ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಕುಮಟಾ ಪೊಲೀಸರು ದೌಡಾಯಿಸಿದ್ದು, ನಾಪತ್ತೆ ಆದವರಿಗಾಗಿ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.


- 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
- ಕೊಲೆಯತ್ನ ಪ್ರಕರಣ: ಆರೋಪ ಸಾಬೀತಾಗದೆ ಪ್ರಶಾಂತ್ ಭಂಡಾರಿ ದೋಷಮುಕ್ತ
- ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ’ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್
- 17 ಜಾನುವಾರುಗಳ ಅಕ್ರಮ ಸಾಗಾಟ: ಲಾರಿ ವಶಕ್ಕೆ, ಆರೋಪಿ ಬಂಧನ
- ಹಲ್ಲೆಗೊಳಗಾದ ಮಹಿಳೆಯರ ಬೆಂಬಲಕ್ಕೆ ಶಾಸಕ ಗಂಟಿಹೊಳೆ ಭರವಸೆ-ಆರೋಪಿತ ಅಧಿಕಾರಿ ವಿರುದ್ಧ ಕಠಿಣ ಕ್ರಮಕ್ಕೆ ದಿಲೀಪ್ ಅರ್ಗೇಕರ್ ಆಗ್ರಹ

- Advertisement -








