- Advertisement -
- Advertisement -

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಉದ್ಯೋಗದ ಭರವಸೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ. ” ಮತಾಂಧರಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ನೊಂದ ಕುಟುಂಬದ ಕಣ್ಣೀರು ಒರೆಸುವುದಲ್ಲದೆ ಅವರ ಕುಟುಂಬದವರ ಭವಿಷ್ಯದ ಭದ್ರತೆಯನ್ನು ಖಾತರಿಗೊಳಿಸುವುದೇ ಬಿಜೆಪಿಯ ಜನಸ್ಪಂದನ’ ಎಂದಿದೆ.


- Advertisement -